ಮಂಗಳವಾರ, ಜೂನ್ 28, 2022
27 °C

ಆನ್‌ಲೈನ್‌ ಮದ್ಯ ನಂಬಿ ₹ 75,999 ಕಳೆದುಕೊಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆನ್‌ಲೈನ್‌ನಲ್ಲಿ ಮದ್ಯ ಖರೀದಿಸಿದ್ದ ನಗರದ ನಿವಾಸಿಯೊಬ್ಬರು, ಡೆಲಿವರಿ ಬಾಯ್‌ ಎಂದು ಕರೆ ಮಾಡಿದ್ದ ವಂಚಕನಿಗೆ ಬ್ಯಾಂಕ್‌ ಖಾತೆ ವಿವರ ಹಾಗೂ ಒನ್‌ ಟೈಂ ಪಾಸ್‌ವರ್ಡ್ (ಒಟಿಪಿ) ಕೊಟ್ಟು ₹ 75,999 ಕಳೆದುಕೊಂಡಿದ್ದಾರೆ.

‘ಇಂದಿರಾನಗರದ 27 ವರ್ಷದ ನಿವಾಸಿಯೊಬ್ಬರು ವಂಚನೆ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೂರ್ವ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಮೂಲಗಳು ತಿಳಿಸಿವೆ.

‘ಲಾಕ್‌ಡೌನ್‌ನಿಂದಾಗಿ ಮನೆಯಲ್ಲಿರುವ ದೂರುದಾರ, ಆನ್‌ಲೈನ್‌ ಮೂಲಕ ಮದ್ಯ ಖರೀದಿಸಿದ್ದರು. ಮದ್ಯವನ್ನು ಮನೆಗೆ ತಂದುಕೊಡುವುದಕ್ಕಾಗಿ ಡೆಲಿವರಿ ಬಾಯ್ ಸೋಗಿನಲ್ಲಿ ಕರೆ ಮಾಡಿದ್ದ ವಂಚಕ, ದೂರುದಾರರ ಬ್ಯಾಂಕ್ ಖಾತೆ ವಿವರ ಹಾಗೂ ಒಟಿಪಿ ಕೇಳಿದ್ದ.’

‘ಆರೋಪಿ ಮಾತು ನಂಬಿದ್ದ ದೂರುದಾರ, ಎಲ್ಲ ಮಾಹಿತಿಯನ್ನೂ ಹಂಚಿಕೊಂಡಿದ್ದರು. ಅದಾದ ಕೆಲ ನಿಮಿಷಗಳಲ್ಲೇ ದೂರುದಾರರ ಬ್ಯಾಂಕ್‌ ಖಾತೆಯಿಂದ ₹ 75,999 ಕಡಿತವಾಗಿದೆ. ಕರೆ ಮಾಡಿದ್ದ ವಂಚಕನ ಮೊಬೈಲ್ ಸಹ ಸ್ವಿಚ್ ಆಫ್ ಆಗಿದೆ. ಈ ಸಂಗತಿ ದೂರಿನಲ್ಲಿದೆ’ ಎಂದೂ ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು