ಶನಿವಾರ, ಜನವರಿ 18, 2020
19 °C

ಹೋಟೆಲ್‌ನಲ್ಲಿ ಲೈವ್‌ ಬ್ಯಾಂಡ್‌; ಯುವತಿಯರ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಲಸದ ಆಮಿಷವೊಡ್ಡಿ ಯುವತಿಯರನ್ನು ನಗರಕ್ಕೆ ಕರೆಸಿಕೊಂಡು ಐಷಾರಾಮಿ ಹೋಟೆಲ್‌ನಲ್ಲಿ ನಡೆಯುವ ಲೈವ್ ಬ್ಯಾಂಡ್‌ನಲ್ಲಿ ನೃತ್ಯ ಮಾಡಿಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಬೆಳ್ಳಂದೂರು ಠಾಣೆ ವ್ಯಾಪ್ತಿಯ ಕಸವನಹಳ್ಳಿಯ ಓನರ್ಸ್ ಕಾರ್ಟ್ (ಈಸ್ಟ್) ಲೇಔಟ್‌ನಲ್ಲಿರುವ ಮನೆಯೊಂದರ ಮೇಲೆ ದಾಳಿ ಮಾಡಿದ್ದ ಪೊಲೀಸರು, ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ.

‘ಉದ್ಯೋಗದ ಆಮಿಷವೊಡ್ಡಿ ಯುವತಿಯರನ್ನು ನಗರಕ್ಕೆ ಕರೆಸಿಕೊಳ್ಳಲಾಗಿತ್ತು. ಅವರನ್ನು ಮನೆಯಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟು, ಐಷಾರಾಮಿ ಹೋಟೆಲ್‌ನಲ್ಲಿ ನಡೆಯುವ ಲೈವ್ ಬ್ಯಾಂಡ್‌ಗೆ ಕಳುಹಿಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಮನೆ ಮೇಲೆ ದಾಳಿ ಮಾಡಲಾಯಿತು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ರಾಜು ಎಂಬಾತನೇ ತಮ್ಮನ್ನು ನಗರಕ್ಕೆ ಕರೆಸಿದ್ದ ಎಂಬುದಾಗಿ ಯುವತಿಯರು ಹೇಳಿಕೆ ನೀಡಿದ್ದಾರೆ. ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯ ಆತ ತಲೆಮರೆಸಿಕೊಂಡಿದ್ದಾನೆ’ ಎಂದು ಮೂಲಗಳು ಹೇಳಿವೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು