ಬೆಂಗಳೂರು: ನನೆಗುದಿಗೆ ಬಿದ್ದಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಆದಷ್ಟು ಬೇಗ ನಡೆಸುವಂತೆ ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಹಾಗೂ ಮಾಜಿ ಸಂಸದರಾದ ಸಿ. ನಾರಾಯಣಸ್ವಾಮಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರಜಾಪ್ರಭುತ್ವದ ಬಲವರ್ಧನೆ ಹಾಗೂ ಕೇಂದ್ರ ಸರ್ಕಾರದಿಂದ ಬರಬೇಕಾದ ಅನುದಾನವನ್ನು ಪಡೆಯುವದೃಷ್ಟಿಯಿಂದ ನೂತನ ಮುಖ್ಯಮಂತ್ರಿ ಯವರು ಈ ಬಗ್ಗೆ ಗಮನ ಹರಿಸಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆಯ ಕರ್ನಾಟಕ ಶಾಖೆಯು ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜಂಟಿ ಸಹಯೋಗದಲ್ಲಿ ಸೆಂಟ್ರಲ್ ಕಾಲೇಜಿನ ಆವರಣದಲ್ಲಿರುವ ನೂತನ ಶೈಕ್ಷಣಿಕ ವಿಭಾಗದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸ್ಥಳೀಯ ಸಂಸ್ಥೆಗಳಿಗೆ ಹಣಕಾಸು ವಿತರಣೆ- 5ನೇ ಕರ್ನಾಟಕ ರಾಜ್ಯ ಹಣಕಾಸು ಆಯೋಗದ ವರದಿ’ ಎಂಬ ವಿಷಯದ ಕುರಿತು ಪ್ರಧಾನ ಭಾಷಣ ಮಾಡಿದ ಅವರು, ಸಕಾಲಕ್ಕೆ ಚುನಾವಣೆ ನಡೆಯದ ಕಾರಣಕ್ಕಾಗಿ ಅಪಾರ ಮೊತ್ತದ ಅನುದಾನ ಅಲಭ್ಯವಾಗಿದೆ ಎಂದು ವಿವರಿಸಿದರು.

1993ರಲ್ಲಿ ಜಾರಿಗೊಂಡ ಸಂವಿಧಾನದ 73 ಮತ್ತು 74ನೇ ತಿದ್ದುಪಡಿಗಳ ದೆಸೆಯಿಂದಾಗಿ ಸ್ಥಳೀಯ ಸಂಸ್ಥೆಗಳ ಸಬಲೀಕರಣ ಮತ್ತು ಅಧಿಕಾರ ವಿಕೇಂದ್ರೀಕರಣದ ಹೊಸ ಮನ್ವಂತರಕ್ಕೆ ನಾಂದಿಯಾಯಿತೆಂದು ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.

ಕೇಂದ್ರ ಹಣಕಾಸು ಆಯೋಗದ ಷರತ್ತುಗಳ ಪಾಲನೆಯಲ್ಲಿ ವಿಫಲವಾದ ಕಾರಣ ಹಣಕಾಸಿನ ನೆರವು ಸ್ಥಗಿತಗೊಂಡು ರಾಜ್ಯದ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ ಕಾರ್ಯಗಳಿಗೆ ಆರ್ಥಿಕವಾಗಿ ಹಿನ್ನಡೆಯಾಗಿದ್ದು ಪ್ರಗತಿ ಕುಂಠಿತವಾಗಿದೆ ಎಂದು ವಿಷಾದಿಸಿದರು.

ಹಿಂದಿನ ಬಿಬಿಎಂಪಿ- ಈಗಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯ ವಿಳಂಬದಿಂದಾಗಿ ರಾಜ್ಯದ ರಾಜಧಾನಿ ಬೆಂಗಳೂರು ಮಹಾನಗರ ಸುಮಾರು 10 ಸಾವಿರ ಕೋಟಿಗಳಷ್ಟು ಕೇಂದ್ರ ಹಣಕಾಸು ನೆರವಿನಿಂದ ವಂಚಿತವಾಗಿದೆ ಎಂದು ಅವರು ವಿಶ್ಲೇಷಿಸಿದರು.

ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳು ಹಾಗೂ ವಿವಿಧ ಸಬ್ಸಿಡಿ ಮತ್ತು ಪಿಂಚಣಿ ಬಾಬ್ತುಗಳಿಗೆ ವಾರ್ಷಿಕ ಸುಮಾರು ಒಂದು ಲಕ್ಷ ಕೋಟಿ ವ್ಯಯಿಸುತ್ತಿದೆ ಎಂದು ವಿವರಿಸಿದರು.

ಇದರ ಪರಿಣಾಮವಾಗಿ ತಲಾ ಆದಾಯದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ ಮೊದಲ ಸ್ಥಾನಕ್ಕೇರಿದೆ ಎಂದು ತಿಳಿಸಿದ ಅವರು, ಆಸ್ತಿ ತೆರಿಗೆ ಸಂಗ್ರಹದ ಮೂಲಕ ಸ್ಥಳೀಯ ಸಂಸ್ಥೆಗಳು ಹೆಚ್ಚಿನಆದಾಯ ಸಂಪನ್ಮೂಲ ಕ್ರೋಢೀಕರಿಸ ಬಹುದೆಂದು ಅಭಿಪ್ರಾಯಪಟ್ಟರು.

ಸಂವಾದ ಗೋಷ್ಠಿಯ ಅಧ್ಯಕ್ಷತೆವಹಿಸಿದ್ದ ನಿವೃತ್ತ ಮುಖ್ಯ ಕಾರ್ಯದರ್ಶಿ ಹಾಗೂ ಐಐಪಿಎ ಕರ್ನಾಟಕ ಶಾಖೆಯ ಅಧ್ಯಕ್ಷ ತ.ಮ.ವಿಜಯ ಭಾಸ್ಕರ್ ಮಾತನಾಡಿ, ಅಧಿಕಾರ ವಿಕೇಂದ್ರೀಕರಣದ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವ ದಕ್ಷಿಣದ ರಾಜ್ಯಗಳು ಹೆಚ್ಚಿನ ಅಭಿವೃದ್ಧಿ ಸಾಧಿಸಿವೆ ಎಂದು ವಿಶ್ಲೇಷಿಸಿದರು.

ರಾಜ್ಯ ಹಣಕಾಸು ಆಯೋಗದ ಸದಸ್ಯರಾದ ಎಂ. ಸನಾವುಲ್ಲಾ, ಹಿರಿಯ ಪ್ರಾಧ್ಯಾಪಕರಾದ ಡಾ. ಕೆ.ಗಾಯತ್ರಿ ಮತ್ತು ಡಾ.ಎನ್. ಶಿವಣ್ಣ ವರದಿಯ ವಿವಿಧ ಆಯಾಮಗಳ ಬಗ್ಗೆ ಬೆಳಕು ಚೆಲ್ಲಿದರು.

ವಿಕೇಂದ್ರೀಕೃತ ಯೋಜನೆ ಮತ್ತು ಅಭಿವೃದ್ಧಿ ಆಯೋಗದ ಅಧ್ಯಕ್ಷರಾದ ಡಿ.ಆರ್.ಪಾಟೀಲ್, ಕುಲಸಚಿವರಾದ ಎ. ನವೀನ್ ಜೋಸೆಫ್, ಐಐಪಿಎ ಕಾರ್ಯದರ್ಶಿ ಡಾ. ಡಿ.ಜೀವನ್ ಕುಮಾರ್, ಉಪಸ್ಥಿತರಿದ್ದರು. ಕಲಾ ನಿಕಾಯದ ಡೀನರಾದ ಪ್ರೊ. ಜ್ಯೋತಿ ವೆಂಕಟೇಶ್ ಪ್ರಾಸ್ತಾವಿಕ ಭಾಷಣ ಮಾಡಿದರು. ಡಾ.ಮಾಲಿನಿ.ಎಂ. ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-4-2120398469

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.