ಶನಿವಾರ, ನವೆಂಬರ್ 28, 2020
19 °C

ಸ್ಥಳೀಯ ಸಂಸ್ಥೆ ಮೀಸಲಾತಿ: ತಡೆಯಾಜ್ಞೆ ತೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್‌ ವಿಭಾಗೀಯ ಪೀಠ ತೆರವುಗೊಳಿಸಿದೆ.

ರೋಸ್ಟರ್‌ ಪಾಲಿಸಿಲ್ಲ ಎಂಬ ಅರ್ಜಿದಾರರ ಮನವಿ ಪರಿಗಣಿಸಿ ಏಕಸದಸ್ಯ ಪೀಠ ಅ.15ರಂದು ತಡೆಯಾಜ್ಞೆ ನೀಡಿತ್ತು.

ತಡೆಯಾಜ್ಞೆ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ, ತಡೆಯಾಜ್ಞೆ ತೆರವುಗೊಳಿಸಿತು. ನವೆಂಬರ್ 2ರೊಳಗೆ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಿತು.‌ ‘ಹಾಸನ, ಅರಸೀಕೆರೆ, ಶಿಡ್ಲಘಟ್ಟ, ಕೊಪ್ಪಳ, ಹರಿಹರ ನಗರಸಭೆಗೆ ನಿಗದಿ ಮಾಡಿರುವ ಮೀಸಲಾತಿ ಪ್ರಶ್ನಿಸಿ ರಿಟ್‌ ಅರ್ಜಿಗಳು ಸಲ್ಲಿಕೆಯಾಗಿದ್ದವು. ಇವುಗಳಿಗೂ ಚುನಾವಣೆ ನಡೆಸಬೇಕು. ಆದರೆ, ಫಲಿತಾಂಶಗಳು ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತವೆ’ ಎಂದು ಪೀಠ ತಿಳಿಸಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.