ಶುಕ್ರವಾರ, ಆಗಸ್ಟ್ 12, 2022
23 °C

ಪಾದರಾಯನಪುರ: ಕ್ವಾರಂಟೈನ್‌ಗೆ ಒಳಪಡಲು ವಿರೋಧ: ಕೊರೊನಾ ಸೋಂಕು ಶಂಕಿತರಿಂದ ಗಲಾಟೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕು ಪ್ರಕರಣಗಳು ಹೆಚ್ಚು ಕಾಣಿಸಿಕೊಂಡು ಸೀಲ್ ಡೌನ್ ಆಗಿರುವ ಪಾದರಾಯನಪುರದಲ್ಲಿ ಕೊರೊನಾ ಸೋಂಕಿತರ ದ್ವಿತೀಯ ಸಂಪರ್ಕ ಹೊಂದಿದ್ದ 58 ಜನರನ್ನು ಭಾನುವಾರ ಕ್ವಾರೆಂಟೈನ್ ಮಾಡುವ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದಿದೆ.

ಪಾದರಾಯನಪುರದ ಗುಡ್ಡದಹಳ್ಳಿ ಅರ್ಫತ್ ನಗರದಲ್ಲಿ 100ಕ್ಕೂ ಹೆಚ್ಚು ಸ್ಥಳೀಯರಿಂದ ಬ್ಯಾರಿಕೇಡ್‌ಗಳನ್ನು ಉರುಳಿಸಿ ಗಲಾಟೆ ಮಾಡಿದ್ದಾರೆ. ಎಲ್ಲ ಕಡೆ ಬ್ಯಾರಿಕೇಡ್ ಹಾಕಿ ನಿರ್ಬಂಧ ಹೇರಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊರಗೆ ಹೋಗೋಕೆ ಆಗ್ತಿಲ್ಲ. ಊಟ ಸಿಗುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಪ್ರಸ್ತುತ ಪಾದರಾಯನಪುರ ವಾರ್ಡ್‌ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ.

ಪಾದರಾಯನಪುರದಲ್ಲಿ ಇಲ್ಲಿಯವರೆಗೆ ಒಟ್ಟು‌18 ಕೊರೊನಾ ಸೋಂಕು ದೃಢಪಟ್ಟಿದೆ. ಮುಂಜಾಗ್ರತಾ ಕ್ರಮವಾಗಿ ಸೀಲ್ ಡೌನ್ ಮಾಡಲಾಗಿದೆ. ಈ ಭಾಗದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತದಲ್ಲಿ ಇದ್ದವರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಪ್ರತ್ಯೇಕ ಕ್ವಾರಂಟೈನ್ ಮಾಡಲಾಗುತ್ತಿದೆ.

ಈ ಸಂಬಂಧ ಮಾತನಾಡಿದ ಪಶ್ಚಿಮ ವಲಯದ ಆರೋಗ್ಯಾಧಿಕಾರಿ ಬಾಲಸುಂದರ್, ಒಟ್ಟು 58 ಜನರು ಕೊರೊನಾ ಸೋಂಕಿತರ ದ್ವಿತೀಯ ಸಂಪರ್ಕದಲ್ಲಿದ್ದರು ಇವರಲ್ಲಿ 17 ಜನ ಸಹಕಾರ ನೀಡಿ,  ಕ್ವಾರಂಟೈನ್ ಆಗಿದ್ದಾರೆ. ಉಳಿದವರು ನಮಗೆ ಸಹಕಾರ ನೀಡಿಲ್ಲ. ಶಾಸಕರು, ಪಾಲಿಕೆ ಸದಸ್ಯರು ಬರಬೇಕು. ನಮಗೆ ಕೊರೊನಾದ ಯಾವುದೇ ಲಕ್ಷಣ ಇಲ್ಲ ಎಂದು ಹೇಳಿದ್ದಾರೆ. ಅವರನ್ನು ಮನವೊಲಿಸಲು ಸಾಧ್ಯವಾಗದ ಕಾರಣ ಸೋಮವಾರ ಬೆಳಗ್ಗೆ ಕ್ವಾರೆಂಟೈನ್ ಮಾಡಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಶ್ರೀರಾಮುಲು ಖಂಡನೆ

ಕುಮಾರಸ್ವಾಮಿ ಖಂಡನೆ

ಗೃಹ ಸಚಿವರೊಂದಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಚರ್ಚೆ

‘ಬೆಂಗಳೂರಿನ ಪಾದರಾಯನಪುರದಲ್ಲಿ ಕ್ವಾರಂಟೈನ್ ಆದವರ ಪರಿಶೀಲನೆಗೆ ಪೊಲೀಸ್ ಹಾಗು ಅರೋಗ್ಯ ಸಿಬ್ಬಂದಿ ಹೋದಾಗ ಅವರ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಾಕಿರುವ ಘಟನೆ ಅತ್ಯಂತ ಖಂಡನೀಯ. ಕೊರೊನ ವಿರುದ್ಧದ ಹೋರಾಟ  ಮಾನವತೆಯ ಹೋರಾಟ. 
ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಬಲವಾದ ಕ್ರಮ ಕೈಗೊಳ್ಳುವಂತೆ ರಾಜ್ಯ ಗೃಹ ಸಚಿವರು, ಡಿಜಿಪಿಯೊಂದಿಗೆ ಮಾತನಾಡಿದ್ದೇನೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟ್ವೀಟ್ ಮಾಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು