ಶನಿವಾರ, ಜುಲೈ 24, 2021
22 °C

ಲಾಕ್‌ಡೌನ್‌ ಪರಿಹಾರಕ್ಕೆ ಷರತ್ತುಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌–19 ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಅಗಸ ಮತ್ತು ಕ್ಷೌರಿಕ ವೃತ್ತಿಯಲ್ಲಿರುವವರಿಗೆ ₹5000 ಪರಿಹಾರ ಪಡೆಯಲು ಕೆಲವು ಷರತ್ತುಗಳನ್ನು ಸರ್ಕಾರ ವಿಧಿಸಿದೆ.

ಷರತ್ತುಗಳು
* ಪರವಾನಿಗೆ ಪಡೆದ ಸಂಸ್ಥೆಯಲ್ಲಿ 4 ಕ್ಕಿಂತ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದು, ಅರ್ಜಿ ಸಲ್ಲಿಸಿದ್ದರೆ ಕೆಲಸದ ಸ್ಥಳದ ಕಡ್ಡಾಯ ಪರಿಶೀಲನೆ ನಡೆಸಲಾಗುವುದು. ಪರವಾನಿಗೆ ಪಡೆಯದ ಸಂಸ್ಥೆಗಳಲ್ಲಿ 2 ಕ್ಕಿಂತ ಹೆಚ್ಚು ಜನ ಅರ್ಜಿ ಸಲ್ಲಿಸಿದ್ದರೆ, ಕಡ್ಡಾಯ ಪರಿಶೀಲನೆ ನಡೆಸಲಾಗುವುದು.
* ಬೇರೆ ರಾಜ್ಯಗಳಿಂದ ಬಂದು ಇಲ್ಲಿ ಅಗಸ/ ಕ್ಷೌರಿಕ ವೃತ್ತಿ ನಿರ್ವಹಿಸುತ್ತಿದ್ದರೆ,ಅವರಿಗೂ ಪರಿಹಾರ ನೀಡಲಾಗುವುದು.
* ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುವುದು.
* ಸೇವಾಸಿಂಧು ಪೋರ್ಟಲ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಆಧಾರ್‌ ಆಧಾರಿತ ಡಿಬಿಟಿ ಮೂಲಕ ಖಾತೆಗಳಿಗೆ ಹಣ ವರ್ಗಾವಣೆ.
* 18 ರಿಂದ 65 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಕಡು ಬಡ ಕುಟುಂಬಗಳಿಗೆ ಸೇರಿದವರಿಗೆ ಮಾತ್ರ ಹಣ ಸಿಗಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು