ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 1.22 ಲಕ್ಷ ಮೌಲ್ಯದ ಅಕ್ರಮ ಮದ್ಯ ವಶ

Last Updated 14 ಏಪ್ರಿಲ್ 2020, 20:40 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್‌ಡೌನ್‌ ಅವಧಿಯಲ್ಲಿ ಅಕ್ರಮ ಮದ್ಯ ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿರುವ ಅಬಕಾರಿ ಪೊಲೀಸರು, ಒಟ್ಟು ₹ 1.22 ಲಕ್ಷ ಮೌಲ್ಯದ 85 ಮದ್ಯದ ಬಾಟಲಿಗಳನ್ನು ಜಪ್ತಿ ಮಾಡಿದ್ದಾರೆ.

ಕೊರೊನಾ ಸೋಂಕು ಹರಡುವಿಕೆ ತಡೆಯಲು ಲಾಕ್‌ಡೌನ್‌ ಘೋಷಿಸಲಾಗಿದ್ದು, ಈ ಅವಧಿಯಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಈ ನಡುವೆ, ಶ್ರೀರಾಂಪುರ ನಗರದ ರಾಯಲ್ ಎನ್ಕ್ಲೇವ್ ಆರ್ಚ್‍ನ ಮುಂಭಾಗದ ರಸ್ತೆಯಲ್ಲಿ, ಅಮೃತಹಳ್ಳಿ ಹಾಗೂ ಲಕ್ಷ್ಮೀ ನಾರಾಯಣ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವಿಶ್ವನಾಥ್ ಮತ್ತು ನರಸಮ್ಮ ಎಂಬವರನ್ನು ಬಂಧಿಸಲಾಗಿದೆ.‌

ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಸಾಗಿಸಿ, ಮಾರಾಟಕ್ಕೆ ಮುಂದಾಗಿದ್ದ ವರುಣೇಶ್ ಮತ್ತು ಎನ್‌. ರಘು ಎಂಬವರನ್ನು ಬಂಧಿಸಲಾಗಿದ್ದು, ಅವರ ಬಳಿ ಶಂಕಿತ ನಕಲಿ ಮದ್ಯ ಪತ್ತೆ ಮಾಡಲಾಗಿದೆ.

ಈ ನಾಲ್ವರ ವಿರುದ್ಧ ಯಲಹಂಕ ವಲಯದ ಅಬಕಾರಿ ನಿರೀಕ್ಷಕ ಕೆ.ಸಿ. ಸಿದ್ದಲಿಂಗಸ್ವಾಮಿ ಮೊಕದ್ದಮೆ ದಾಖಲಿಸಿ, ನ್ಯಾಯಾಲಯದ ಎದುರು ಹಾಜರುಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT