ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶನಿವಾರ ರಾತ್ರಿಯಿಂದಲೇ ಬೆಂಗಳೂರು ನಗರದಲ್ಲಿ ಕರ್ಫ್ಯೂ ಜಾರಿ: ಪೊಲೀಸ್ ಕಮಿಷನರ್

Last Updated 22 ಮೇ 2020, 13:04 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್‌ಡೌನ್‌ 4.0 ಹಿನ್ನೆಲೆಯಲ್ಲಿ ಶನಿವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 7ರವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ’ಇದುವರೆಗಿನ ಲಾಕ್‌ಡೌನ್‌ಗೆ ಸಹಕರಿಸಿದ ರೀತಿಯಲ್ಲೇ ಜನರು ಕರ್ಫ್ಯೂಗೂ ಸಹಕರಿಸಬೇಕು’ ಎಂದು ಕೋರಿದರು.

‘ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಅದರಂತೆ ಕರ್ಫ್ಯೂ ಅವಧಿಯಲ್ಲಿ ನಗರದಾದ್ಯಂತ ಬಿಗಿ ಭದ್ರತೆ ಇರಲಿದೆ’ ಎಂದರು.

‘ವೈದ್ಯಕೀಯ, ಔಷಧಿ, ದಿನಸಿ... ಹೀಗೆ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ ಇರಲಿದೆ. ಬೇಕಾಬಿಟ್ಟಿಯಾಗಿ ಹಾಗೂ ಅನಗತ್ಯವಾಗಿ ಓಡಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

‘ಸಭೆ, ಸಮಾರಂಭ ಏನೂ ಇರುವುದಿಲ್ಲ. ಕೊರೊನಾ ವೈರಾಣು ಹರಡುವಿಕೆ ತಡೆಯಲು ಸರ್ಕಾರದ ಆದೇಶವನ್ನು ಪ್ರತಿಯೊಬ್ಬರು ಪಾಲಿಸಬೇಕು’ ಎಂದು ಅವರು ಹೇಳಿದರು.

ಹೆಚ್ಚುವರಿ ಪೊಲೀಸ್ ಕಮಿಷನರ್‌ಗಳಾದ ಮುರುಗನ್, ಸೌಮೇಂದು ಮುಖರ್ಜಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT