ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾದರಾಯನಪುರ ಗಲಾಟೆ ಪ್ರಕರಣ | ಆರೋಪಿ ಇರ್ಫಾನ್ ಪೊಲೀಸ್ ಕಸ್ಟಡಿಗೆ

Last Updated 28 ಏಪ್ರಿಲ್ 2020, 19:45 IST
ಅಕ್ಷರ ಗಾತ್ರ

ಬೆಂಗಳೂರು: ಪಾದರಾಯನಪುರ ಗಲಾಟೆ ಪ್ರಕರಣದ ಪ್ರಮುಖ ಆರೋಪಿ ಇರ್ಫಾನ್‌ನನ್ನು ಹೆಚ್ಚಿನ ವಿಚಾರಣೆಗಾಗಿ ಮೇ 1ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಇದೇ 19ರಂದು ಬಿಬಿಎಂಪಿ, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆದ ಬಳಿಕ ಇರ್ಫಾನ್ ತಲೆಮರೆಸಿಕೊಂಡಿದ್ದ. ಸೋಮವಾರ ಆತನನ್ನು ಪಶ್ಚಿಮ ವಿಭಾಗದ ಪೊಲೀಸರು ಬಂಧಿಸಿದ್ದರು.

ಆತನನ್ನು 3ನೇ ಎಸಿಎಂಎಂ ನ್ಯಾಯಾಧೀಶರ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಗಿತ್ತು.

‘ಪ್ರಕರಣವು ಗಂಭೀರ ಸ್ವರೂಪದ್ದಾಗಿದೆ. ಇದರಲ್ಲಿ ಮತ್ತಷ್ಟು ಮಂದಿ ಶಾಮೀಲಾಗಿರುವ ಮಾಹಿತಿ ಇದೆ. ಇರ್ಫಾನ್‌ನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕು. ಹೀಗಾಗಿ, ಕಸ್ಟಡಿಗೆ ನೀಡಿ’ ಎಂದು ಪೊಲೀಸರು ಕೋರಿದ್ದರು.

ರಾಜಕಾರಣಿ ವಿಚಾರಣೆ ಸಾಧ್ಯತೆ: ಕರ್ನಾಟಕ ಫೋರಂ ಆಫ್ ಡಿಗ್ನೀಟಿ (ಕೆಎಫ್‌ಡಿ) ಇರ್ಫಾನ್‌ ಎಂದೇ ಗುರುತಿಸಿಕೊಂಡಿದ್ದ ಆರೋಪಿ, ಸ್ಥಳೀಯ ರಾಜಕಾರಣಿಯೊಬ್ಬರ ಜೊತೆ ಒಡನಾಟವಿಟ್ಟುಕೊಂಡಿದ್ದ. ಗಲಾಟೆಯಲ್ಲಿ ರಾಜಕಾರಣಿ ಪಾತ್ರವೇನು ಎಂಬುದನ್ನು ತಿಳಿದುಕೊಳ್ಳುವುದಕ್ಕಾಗಿ ಅವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT