ಮಂಗಳವಾರ, ಆಗಸ್ಟ್ 4, 2020
24 °C

ಲಾಕ್‌ಡೌನ್ ನಿಯಮ ಉಲ್ಲಂಘನೆ | ಮೊದಲ ದಿನ 200 ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲಾಕ್‌ಡೌನ್‌ನ ಮೊದಲ ದಿನವಾದ ಬುಧವಾರ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ನಗರದ ವಿವಿಧ ಭಾಗಗಳಲ್ಲಿ 200 ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಪೊಲೀಸ್‌ ಕಮಿಷನರ್ ಭಾಸ್ಕರ ರಾವ್, ‘ಲಾಕ್‌ಡೌನ್‌ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಕಾರು, ದ್ವಿಚಕ್ರ ವಾಹನಗಳು ಸೇರಿ 200 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೊದಲ ದಿನ ಆಗಿದ್ದರಿಂದ ಪೊಲೀಸರು ಒಂದಷ್ಟು ಮೃದುವಾಗಿ ವರ್ತಿಸಿದ್ದಾರೆ. ಮುಂದಿನ ಆರು ದಿನ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆ’ ಎಂದರು.

ಈ ಮಧ್ಯೆ, ಕೋವಿಡ್‌ ಹರಡುತ್ತಿರುವ ಹಿನ್ನೆಲೆಯಲ್ಲಿ ಮನೆಯಲ್ಲೇ ಇರಬೇಕಾದ ಅಗತ್ಯದ ಬಗ್ಗೆ ಮಹಾಲಕ್ಷ್ಮಿ ಲೇಔಟ್‌ ಪೊಲೀಸರು ರಸ್ತೆಗಿಳಿದು ಜಾಗೃತಿ ಮೂಡಿಸಿದರು.

ಈವರೆಗೆ 515 ಪೊಲೀಸ್‌ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಶೇ 25ರಷ್ಟು ಪೊಲೀಸರು ಕ್ವಾರಂಟೈನ್‌ನಲ್ಲಿ ಇದ್ದಾರೆ. 50 ವರ್ಷ ದಾಟಿದ ಪೊಲೀಸ್‌ ಸಿಬ್ಬಂದಿ ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ. 24 ಪೊಲೀಸ್‌ ಠಾಣೆಗಳನ್ನು ಸೀಲ್‌ಡೌನ್‌ ಮಾಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು