ಶನಿವಾರ, ಜನವರಿ 16, 2021
19 °C
ಪೊಲೀಸರ ಸುಪರ್ದಿಯಲ್ಲಿ 46,673 ವಾಹನ

ಲಾಕ್‌ಡೌನ್ ಉಲ್ಲಂಘನೆ | ಒಂದೇ ದಿನಕ್ಕೆ 973 ವಾಹನ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲಾಕ್‌ಡೌನ್‌ ವೇಳೆ ಕೆಲ ಸೇವೆಗಳಿಗೆ ರಾಜ್ಯ ಸರ್ಕಾರ ವಿನಾಯಿತಿ ನೀಡುತ್ತಿದ್ದಂತೆ ಬಹುತೇಕರು ತಮ್ಮ ವಾಹನಗಳ ಸಮೇತ ರಸ್ತೆಗೆ ಇಳಿದು ಅನಗತ್ಯವಾಗಿ ಓಡಾಡುತ್ತಿದ್ದಾರೆ. ನಿಯಮ ಉಲ್ಲಂಘಿಸಿದ್ದಕ್ಕಾಗಿ ಸೋಮವಾರ ಒಂದೇ ದಿನದಲ್ಲೇ 973 ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ನಗರದ ಹಲವೆಡೆ ಚೆಕ್‌ಪೋಸ್ಟ್‌ಗಳಲ್ಲಿ ಸಂಚಾರ ಪೊಲೀಸರು ಕೆಲಸ ಮಾಡುತ್ತಿದ್ದಾರೆ. ಪಾಸ್‌ ಇರುವ ಹಾಗೂ ಅಗತ್ಯ ಸೇವೆ ವಾಹನಗಳ ಓಡಾಟಕ್ಕೆ ಮಾತ್ರ ಅವಕಾಶ ಕಲ್ಪಿಸುತ್ತಿದ್ದಾರೆ.

ಪಾಸ್‌ ದುರುಪಯೋಗಪಡಿಸಿಕೊಂಡು ಅನಗತ್ಯವಾಗಿ ಓಡಾಡುವ ಹಾಗೂ ಪಾಸ್‌ ಇಲ್ಲದ ವಾಹನಗಳನ್ನು ತಪಾಸಣೆಗೆ ಒಳಪಡಿಸಿ ಜಪ್ತಿ ಮಾಡುತ್ತಿದ್ದಾರೆ.

‘ನಗರದಲ್ಲಿ ಲಾಕ್‌ಡೌನ್‌ ಮುಂದುವರಿದಿದೆ. ರಾಜ್ಯ ಸರ್ಕಾರ ಕೆಲ ಸೇವೆಗಳಿಗೆ ಮಾತ್ರ ವಿನಾಯಿತಿ ನೀಡಿದೆ. ಆದರೆ, ಹಲವರು ತಮ್ಮ ವಾಹನಗಳಲ್ಲಿ ಸುತ್ತಾಡುತ್ತಿದ್ದಾರೆ’ ಎಂದು ಸಂಚಾರ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

‘ಲಾಕ್‌ಡೌನ್‌ ಜಾರಿಯಾದಾಗಿನಿಂದ ಇದುವರೆಗೂ 46,673 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಆ ವಾಹನಗಳನ್ನು ಆಯಾ ಠಾಣೆ ವ್ಯಾಪ್ತಿಯಲ್ಲೇ ನಿಲ್ಲಿಸಲಾಗಿದೆ. ಲಾಕೌಡೌನ್ ಮುಗಿದ ನಂತರ ವಾಹನಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುತ್ತೇವೆ. ನ್ಯಾಯಾಲಯದ ಆದೇಶದನ್ವಯ ವಾಹನಗಳನ್ನು ಸಂಬಂಧಪಟ್ಟವರಿಗೆ ನೀಡಲಿದ್ದೇವೆ’ ಎಂದು ಅಧಿಕಾರಿ ಮಾಹಿತಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು