ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕರ್ನಾಟಕ ದರ್ಶನ’ ಎಲ್ಲ ಮಕ್ಕಳಿಗೂ ಅವಕಾಶ ಸಾಧ್ಯತೆ

ಜಾನಪದ ಲೋಕ ಬೆಳ್ಳಿ ಹಬ್ಬ ಲಾಂಛನ ಬಿಡುಗಡೆ
Last Updated 12 ಫೆಬ್ರುವರಿ 2020, 19:37 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ದರ್ಶನ ಯೋಜನೆಯನ್ನು 8, 9ನೇ ತರಗತಿಯ ಎಲ್ಲ ಸಮುದಾಯದ ವಿದ್ಯಾರ್ಥಿಗಳಿಗೂ ವಿಸ್ತರಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು.

ವಿಧಾನಸೌಧದಲ್ಲಿ ಬುಧವಾರ ಜಾನಪದ ಲೋಕ ಬೆಳ್ಳಿ ಹಬ್ಬದ ಲಾಂಛನ ಬಿಡುಗಡೆ ಮಾಡಿ ಮಾತನಾಡಿ, ‘ಕರ್ನಾಟಕ ದರ್ಶನ ಯೋಜನೆಯಲ್ಲಿ ಪರಿಶಿಷ್ಟ ಜಾತಿ, ವರ್ಗದ ಮಕ್ಕಳಿಗೆ ಮಾತ್ರ ಉಚಿತವಾಗಿ ಶೈಕ್ಷಣಿಕ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಇದರಿಂದ ಮಕ್ಕಳ ಮನಸ್ಸಿನಲ್ಲಿ ಜಾತಿ ವಿಷ ಬೀಜ ಬಿತ್ತಿದಂತೆ ಆಗುತ್ತಿದೆ. ಹಾಗಾಗಿ ಎಲ್ಲ ಸಮುದಾಯದ ಮಕ್ಕಳಿಗೂ ವಿಸ್ತರಿಸುವಂತೆ ಕೋರಿದ್ದು, ಬಜೆಟ್‌ನಲ್ಲಿ ಅವಕಾಶ ಸಿಗಬಹುದು’ ಎಂದರು.

ಜಾನಪದ ಲೋಕದ ಬೆಳ್ಳಿ ಹಬ್ಬದ ಕಾರ್ಯಕ್ರಮ ಇದೇ 16ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಫೆ. 17 ಹಾಗೂ 18ರಂದು ರಾಮನಗರ ಸಮೀಪದ ಜಾನಪದ ಲೋಕದಲ್ಲಿ ‘ಲೋಕೋತ್ಸವ’ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT