ಬೆಂಗಳೂರು: ಭಾರತ ಯಾತ್ರಾ ಕೇಂದ್ರ ನೀಡುವ ‘ಡಾ. ರಾಮಮನೋಹರ ಲೋಹಿಯಾ ಪ್ರಶಸ್ತಿ’ಗೆ ಸಮಾಜವಾದಿ ಲೇಖಕ ಹಸನ್ ನಯೀಂ ಸುರಕೋಡ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿ ₹ 10 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್. ಶಂಕರ್ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ.

ಕೇಂದ್ರವು ಇದೇ 22ರಂದು ಸಂಜೆ 4 ಗಂಟೆಗೆ ಧಾರವಾಡದ ವಿದ್ಯಾವರ್ಧಕ ಸಂಘದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಂಡಿದೆ. ಸಾಹಿತಿ ಕಾಳೇಗೌಡ ನಾಗವಾರ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಧಾರವಾಡದ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ, ಪತ್ರಕರ್ತ ಜಿ.ಎನ್. ಮೋಹನ್ ಅವರು ಅತಿಥಿಗಳಾಗಿ ಭಾಗವಹಿಸುತ್ತಾರೆ. ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕೇಂದ್ರದ ಕೆ.ವಿ. ನಾಗರಾಜಮೂರ್ತಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.