ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭಾ ಚುನಾವಣೆ | ಶಸ್ತ್ರಾಸ್ತ್ರ ಠೇವಣಿಗೆ ಗಡುವು: ಕೆಲವರಿಗೆ ವಿನಾಯಿತಿ

Published 19 ಮಾರ್ಚ್ 2024, 18:29 IST
Last Updated 19 ಮಾರ್ಚ್ 2024, 18:29 IST
ಅಕ್ಷರ ಗಾತ್ರ

ಬೆಂಗಳೂರು: ‘ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪರವಾನಗಿ ಶಸ್ತ್ರಾಸ್ತ್ರಗಳನ್ನು ಠಾಣೆಗಳಲ್ಲಿ ಠೇವಣಿ ಇರಿಸಲು ಮಾರ್ಚ್ 25ರವರೆಗೆ ಅವಕಾಶವಿದೆ’ ಎಂದು ಪೊಲೀಸ್ ಕಮಿಷನರ್ ಬಿ. ದಯಾನಂದ್ ತಿಳಿಸಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಶಸ್ತ್ರಾಸ್ತ್ರ ಇಟ್ಟುಕೊಳ್ಳಲು ಅವಕಾಶವಿಲ್ಲ. ಶಸ್ತ್ರಾಸ್ತ್ರಗಳನ್ನು ಠೇವಣಿ ಇರಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದ್ದಾರೆ.

‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಇಲಾಖೆಗಳು, ಅಧಿಕಾರಿಗಳು, ಬ್ಯಾಂಕ್ ಹಾಗೂ ಭದ್ರತಾ ಏಜೆನ್ಸಿಗಳು, ಶೂಟಿಂಗ್ ಕ್ರೀಡಾಪಟುಗಳು, ನ್ಯಾಷನಲ್ ರೈಫಲ್ ಅಸೋಸಿಯೇಷನ್ ಸದಸ್ಯರು ಹಾಗೂ ಕೊಡವ ಸಮಾಜದವರಿಗೆ ಶಸ್ತ್ರಾಸ್ತ್ರ ಠೇವಣಿಯಿಂದ ವಿನಾಯಿತಿ ಇದೆ’ ಎಂದರು.

‘ಯಾರಿಗಾದರೂ ವಿನಾಯಿತಿ ಬೇಕಾದರೆ, ಪರಿಶೀಲನಾ ಸಮಿತಿಗೆ ಮನವಿ ಸಲ್ಲಿಸಬಹುದು. ಅವರು ಮನವಿ ಪರಿಶೀಲಿಸಿ ಕ್ರಮ ಕೈಗೊಳ್ಳಲಿದ್ದಾರೆ’ ಎಂದು ದಯಾನಂದ್ ಹೇಳಿದರು.

102 ಚೆಕ್‌ಪೋಸ್ಟ್: ‘ಚುನಾವಣೆ ಅಕ್ರಮಗಳನ್ನು ತಡೆಯಲು ಹಾಗೂ ವಾಹನಗಳ ತಪಾಸಣೆಗೆಂದು ನಗರದ 102 ಕಡೆಗಳಲ್ಲಿ ಚೆಕ್‌ಪೋಸ್ಟ್ ನಿರ್ಮಿಸಲಾಗಿದೆ’ ಎಂದು ದಯಾನಂದ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT