ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನ ವಿರೋಧಿ ಪಕ್ಷಕ್ಕೆ ದಲಿತರ ಮತವಿಲ್ಲ: ಬಹುಜನ ದಲಿತ ಸಂಘರ್ಷ ಸಮಿತಿ

Published 24 ಏಪ್ರಿಲ್ 2024, 22:48 IST
Last Updated 24 ಏಪ್ರಿಲ್ 2024, 22:48 IST
ಅಕ್ಷರ ಗಾತ್ರ

ಬೊಮ್ಮನಹಳ್ಳಿ: ಸಂವಿಧಾನವನ್ನು ಬದಲಾಯಿಸಿ, ವರ್ಣಾಶ್ರಮ ಪದ್ದತಿಯನ್ನು ಜಾರಿಗೊಳಿಸುವ ಗುಪ್ತ ಅಜೆಂಡಾದೊಂದಿಗೆ ಮತ್ತೆ ಚುನಾವಣೆಯನ್ನು ಗೆಲ್ಲುವ ಹವಣಿಕೆಯಲ್ಲಿರುವ ಬಿಜೆಪಿಗೆ ಈ ಬಾರಿ ದಲಿತರು ಮತ ಚಲಾಯಿಸುವುದಿಲ್ಲ’ ಎಂದು ಬಹುಜನ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಆರ್.ಎಂ.ಎನ್.ರಮೇಶ್ ಹೇಳಿದರು.

ಬುಧವಾರ ಹೆಚ್ಎಸ್ಆರ್ ಬಡಾವಣೆಯಲ್ಲಿ ‘ಮೋದಿ ಆಳ್ವಿಕೆ ವಿರುದ್ಧ ಜನತಾ ಆರೋಪ ಪಟ್ಟಿ’ ಬಿಡುಗಡೆ ಮಾಡಿ ಮಾತನಾಡಿದರು.

ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಿ ಸರ್ವಾಧಿಕಾರದತ್ತ ಹೋಗುತ್ತಿರುವ ಬಿಜೆಪಿಯ ನಡೆ ಅಪಾಯಕಾರಿಯಾದುದು. ಸಂಸದೀಯ ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯ ಎಂದರು.

‘ಬಹುಜನ ಸಂಘರ್ಷ ಸಮಿತಿಯು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸಿತ್ತು. ಹೀಗಾಗಿ ಈ ಬಾರಿಯೂ ಬಿಜೆಪಿ ಮೈತ್ರಿಕೂಟವನ್ನು ಬೆಂಬಲಿಸುತ್ತದೆ ಎಂದು ಸುಳ್ಳು ಸುದ್ದಿ ಹರಡಲಾಗುತ್ತಿದೆ. ಜೆಡಿಎಸ್ ಸದ್ಯ ಕೋಮುವಾದಿ, ಫ್ಯಾಸಿಸ್ಟ್ ಶಕ್ತಿಗಳ ಜತೆ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ನಾವು ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತೇವೆ’ ಎಂದು ತಿಳಿಸಿದರು.

ದಲಿತ ಸೇವಾ ಸಮಿತಿ ರಾಜ್ಯಾಧ್ಯಕ್ಷ ಚಂದ್ರಪ್ಪ, ಬಹುಜನ ದಲಿತ ಸಂಘರ್ಷ ಸಮಿತಿ ಮುಖಂಡರಾದ ರಾಮಚಂದ್ರ, ರವಿಕುಮಾರ್, ಮಾಲತಿ ನಂದೀಶ್, ಮುರಳಿ ವೆಂಕಟೇಶ್, ಅಗರ ಶಂಕರ್, ಮೀನಾಕ್ಷಿ, ಸುಶೀಲಾ ಕುಮಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT