ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ದಕ್ಷಿಣ ಕ್ಷೇತ್ರ: ರ‍್ಯಾಂಡಮೈಸೇಷನ್ ಪೂರ್ಣ

Published 14 ಏಪ್ರಿಲ್ 2024, 14:38 IST
Last Updated 14 ಏಪ್ರಿಲ್ 2024, 14:38 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಇವಿಎಂ, ವಿವಿ ಪ್ಯಾಟ್‌ಗಳ 2ನೇ ಹಂತದ  ರ‍್ಯಾಂಡಮೈಸೇಷನ್ ಕಾರ್ಯ ಭಾನುವಾರ ಪೂರ್ಣಗೊಂಡಿದೆ.

ದಕ್ಷಿಣ ಚುನಾವಣಾಧಿಕಾರಿ ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ವಿನೋತ್ ಪ್ರಿಯಾ, ಬೊಮ್ಮನಹಳ್ಳಿಯ ಸಹಾಯಕ ಚುನಾವಣಾಧಿಕಾರಿ ಅಜಿತ್, ಸಾಮಾನ್ಯ ವೀಕ್ಷಕ ಮಕರಂದ್ ಪಾಂಡುರಂಗ್ ಸಮ್ಮುಖದಲ್ಲಿ ಪೂರ್ಣಗೊಳಿಸಲಾಯಿತು.

ಗೋವಿಂದರಾಜನಗರ, ವಿಜಯನಗರ, ಚಿಕ್ಕಪೇಟೆ, ಬಸವನಗುಡಿ, ಪದ್ಮನಾಭನಗರ, ಬಿಟಿಎಂ ಲೇಔಟ್, ಜಯನಗರ ಹಾಗೂ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಗಳು ಈ ವ್ಯಾಪ್ತಿಯಲ್ಲಿದ್ದು, 2,120 ಮತಗಟ್ಟೆಗಳು ಬರಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT