ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Lok Sabha Election | ಗ್ರಾಮಾಂತರದಲ್ಲಿ ಧರ್ಮಯುದ್ಧ: ಮುನಿರತ್ನ

Published 28 ಮಾರ್ಚ್ 2024, 16:21 IST
Last Updated 28 ಮಾರ್ಚ್ 2024, 16:21 IST
ಅಕ್ಷರ ಗಾತ್ರ

ರಾಜರಾಜೇಶ್ವರಿನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಧರ್ಮ ಯುದ್ಧ ನಡೆಯುತ್ತಿದೆ. ಈ ಯುದ್ಧದಲ್ಲಿ ಧರ್ಮದ ಹಾದಿಯಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಎನ್. ಮಂಜುನಾಥ್ ನಡೆಯುತ್ತಿದ್ದು, ಧರ್ಮಕ್ಕೆ ಜಯ ಸಿಗಲಿದೆ ಎಂದು ಶಾಸಕ ಮುನಿರತ್ನ ಹೇಳಿದರು.

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು, ಮುಖಂಡರ ‘ಸಹೃದಯರ ಸಮಾವೇಶ’ದಲ್ಲಿ ಅವರು ಮಾತನಾಡಿದರು.

ಡಿ.ಕೆ. ಶಿವಕುಮಾರ್, ಡಿ.ಕೆ.ಸುರೇಶ್ ಅವರ ಆಟ, ದಬ್ಬಾಳಿಕೆಗೆ ಕೊನೆಗಾಣಿಸಲು ಸಮರ್ಥ ಅಭ್ಯರ್ಥಿಯಾಗಿ ಡಾ.ಸಿ.ಎನ್. ಮಂಜುನಾಥ್ ಅವರು ಶ್ರೀರಾಮ ರೂಪದಲ್ಲಿ ಬಂದಿದ್ದಾರೆ ಎಂದು ಬಣ್ಣಿಸಿದರು.

‘ಕುಣಿಗಲ್‍ನಲ್ಲಿ ಮಾಜಿ ಸಚಿವ ಡಿ.ನಾಗರಾಜಯ್ಯ, ತುಮಕೂರು ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಡಿ.ಕೃಷ್ಣಕುಮಾರ್ ಎಂಬ ಜೆಡಿಎಸ್‌–ಬಿಜೆಪಿ ಸಹೋದರರನ್ನು ಒಗ್ಗೂಡಿಸಿದ್ದು, ಈ ಚುನಾವಣೆಯಲ್ಲಿ ಡಿ.ಕೆ.ಸುರೇಶ್‍ಗೆ ಸೋಲಿನ ರುಚಿ ತೋರಿಸುತ್ತೇನೆ’ ಎಂದು ಸವಾಲು ಹಾಕಿದರು.

ಬಿಜೆಪಿ ಅಭ್ಯರ್ಥಿ ಸಿ.ಎನ್.ಮಂಜುನಾಥ್, ‘ವೈದ್ಯರಿಗೆ ಜಾತಿ, ಧರ್ಮ ಮುಖ್ಯವಲ್ಲ. ಅಭಿವೃದ್ದಿಗಾಗಿ, ಬಡವ, ಶ್ರೀಮಂತ ಎನ್ನದೆ ಎಲ್ಲರನ್ನೂ ವಿಶ್ವಾಸದಿಂದ ಕಾಣಲು ಬೆಂಬಲಿಸಿ’ ಎಂದು ಮನವಿ ಮಾಡಿದರು.

ಸಹೃದಯರ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು ಭಾಗವಹಿಸಿರುವುದು.
ಸಹೃದಯರ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು ಭಾಗವಹಿಸಿರುವುದು.

ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಎಸ್.ಸಿ.ಮೋರ್ಚಾ ಉಪಾಧ್ಯಕ್ಷ ಎಂ.ಮಂಜುನಾಥ್, ಪಾಲಿಕೆ ಮಾಜಿ ಸದಸ್ಯ ಜಿ.ಎಚ್.ರಾಮಚಂದ್ರ, ಮುಖಂಡ ಕೆ.ಎಸ್.ಯೋಗೇಶ್, ಕ್ಷೇತ್ರದ ಬಿಜೆಪಿ ಅಧ್ಯಕ್ಷ ಗೋವಿಂದರಾಜು, ಬೆಂಗಳೂರು ವಿಭಾಗದ ಜೆಡಿಎಸ್ ಯುವಘಟಕದ ಕಾರ್ಯಾಧ್ಯಕ್ಷ ನರಸಿಂಹಮೂರ್ತಿ ಭಾಗವಹಿಸಿದ್ದರು. ಸಹೃದಯರ ಸಮಾವೇಶದಲ್ಲಿ ಜೆಡಿಎಸ್‌ ಕಾರ್ಯಕರ್ತರ ಕೊರತೆ ಎದ್ದು ಕಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT