ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ | ಎನ್‌ಡಿಎ ಸೋಲಿಸಿ: ಎಸ್.ಆರ್. ಹಿರೇಮಠ

Published 18 ಮಾರ್ಚ್ 2024, 15:45 IST
Last Updated 18 ಮಾರ್ಚ್ 2024, 15:45 IST
ಅಕ್ಷರ ಗಾತ್ರ

ಬೆಂಗಳೂರು: ‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಸಾಂವಿಧಾನಿಕ ಮಾರ್ಗದಲ್ಲಿ ನಡೆದಿದೆ. ರೈತ ಹಾಗೂ ಜನವಿರೋಧಿ ನೀತಿ ಅನುಸರಿಸುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಸರ್ಕಾರವನ್ನು ಸೋಲಿಸಬೇಕು. ಎಡ, ಪ್ರಜಾಸತ್ತಾತ್ಮಕ, ಸಮಾಜಮುಖಿ ಪಕ್ಷ ಹಾಗೂ ಸಂಘಟನೆಗಳನ್ನು ಬೆಂಬಲಿಸಬೇಕು’ ಎಂದು ಜನಾಂದೋಲನಗಳ ಮಹಾಮೈತ್ರಿ (ಜೆಜೆಎಂ) ಒತ್ತಾಯಿಸಿದೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಜನತಾ ಆರೋಪ ಪಟ್ಟಿ ಬಿಡುಗಡೆಗೊಳಿಸಿ ಮಾತನಾಡಿದ ಜೆಜೆಎಂ ಅಧ್ಯಕ್ಷ ಎಸ್.ಆರ್. ಹಿರೇಮಠ, ‘ಕೇಂದ್ರ ಸರ್ಕಾರ ಜನತಂತ್ರದ ಆಧಾರ ಸ್ತಂಭಗಳಾದ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಿರ್ನಾಮಗೊಳಿಸಿದೆ. ಸಾಂವಿಧಾನಿಕ ಸ್ವತಂತ್ರ ಸಂಸ್ಥೆಗಳನ್ನು ತಮ್ಮ ಕೀಳು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ. ಆರ್ಥಿಕ ಮತ್ತು ಸಾಮಾಜಿಕ ವ್ಯವಸ್ಥೆಯನ್ನು ಬುಡಮೇಲು ಮಾಡಿ ಭಾವನಾತ್ಮಕ ವಿಷಯಗಳನ್ನು ಮುನ್ನೆಲೆಗೆ ತಂದು ರಾಜಕೀಯ ಲಾಭ ಪಡೆದುಕೊಳ್ಳುತ್ತಿದೆ’ ಎಂದು ದೂರಿದರು.

‘ಸಿಬಿಐ, ಜಾರಿ ನಿರ್ದೇಶನಾಲಯ (ಇಡಿ), ಆದಾಯ ತೆರಿಗೆ ಇಲಾಖೆ (ಐಟಿ), ಹಣಕಾಸು ಆಯೋಗ, ಗುಪ್ತದಳ, ಚುನಾವಣಾ ಆಯೋಗ, ವಿಶ್ವವಿದ್ಯಾಲಯಗಳು, ರಾಷ್ಟ್ರೀಕೃತ ಬ್ಯಾಂಕುಗಳು ಮುಂತಾದ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸಲಾಗುತ್ತಿದೆ. ಈ ಸಂಸ್ಥೆಗಳು ಆಡಳಿತ ಪಕ್ಷದ ಕೈಗೊಂಬೆಗಳಂತೆ ಕೆಲಸ ಮಾಡುತ್ತಿವೆ’ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಕಾರ್ಮಿಕ ನಾಯಕ ಮೈಕಲ್ ಫರ್ನಾಂಡಿಸ್, ಅಕ್ಬರ್ ಅಲಿ ಉಡುಪಿ, ಉಗ್ರನರಸಿಂಹ, ಕೆ.ವಿ. ಭಟ್, ಗೋಪಾಲ್, ಟಿ.ಆರ್. ಚಂದ್ರಶೇಖರ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT