ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಬೆಂಗಳೂರು: ಮತದಾನ ಜಾಗೃತಿ ಕಾಲ್ನಡಿಗೆ ಜಾಥಾದಲ್ಲಿ ವಿದ್ಯಾರ್ಥಿಗಳು ಭಾಗಿ

Published : 19 ಏಪ್ರಿಲ್ 2024, 15:27 IST
Last Updated : 19 ಏಪ್ರಿಲ್ 2024, 15:27 IST
ಫಾಲೋ ಮಾಡಿ
Comments
ಮತಗಟ್ಟೆಗಳಲ್ಲಿನ ಸಾಲಿನ ಮಾಹಿತಿಗೆ ‘ಕ್ಯೂ ಸಿಸ್ಟಂ’
ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮತದಾರರ ಅನುಕೂಲಕ್ಕಾಗಿ ಈ ಬಾರಿ ಹೆಚ್ಚು (8984) ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಎಲ್ಲಾ ರೀತಿಯ ವ್ಯವಸ್ಥೆಗಳೂ ಇವೆ.  ‘ಕ್ಯೂ ಸಿಸ್ಟಂ’ ತಂತ್ರಾಂಶದ ಮೂಲಕ ಮತಗಟ್ಟೆಗಳಲ್ಲಿ ಸರತಿ ಸಾಲು ಎಷ್ಟಿದೆ ಎಂಬುದನ್ನು ಮನೆಯಿಂದಲೇ ನೋಡಿಕೊಂಡು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ತಿಳಿಸಿದರು. ಬಳ್ಳಾರಿ ಮುಖ್ಯರಸ್ತೆಯಲ್ಲಿ ಬರುವ ‘ಎಲ್ ಆ್ಯಂಡ್‌ ಟಿ ಟೆಕ್ನಾಲಜಿ ಸರ್ವೀಸಸ್ ಸಂಸ್ಥೆ’ಯ ಸಭಾಂಗದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಎಲ್ಲರೂ ಮತದಾನದಲ್ಲಿ ಪಾಲ್ಗೊಂಡು ದೇಶಕ್ಕೆ ಗರ್ವ ತರುವ ಕೆಲಸ ಮಾಡೋಣ. ಬೆಂಗಳೂರಿನಲ್ಲಿ ಮತದಾನ ಹಕ್ಕನ್ನು ಹೊಂದಿಲ್ಲದೇ ಇರುವವರು ಮತದಾನದ ದಿನ ತಮ್ಮ-ತಮ್ಮ ಊರುಗಳಿಗೆ ತೆರಳಿ ತಪ್ಪದೆ ಮತದಾನ ಮಾಡಿ’ ಎಂದು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT