ಬೆಂಗಳೂರು: ಏಪ್ರಿಲ್ 26 ರಂದು ಶುಕ್ರವಾರ ನಡೆಯಲಿರುವ ಲೋಕಸಭಾ ಚುನಾವಣೆ ಪ್ರಯುಕ್ತ ಅಂದು ಬೆಂಗಳೂರು ಮೆಟ್ರೊ ರೈಲು ಸೇವೆ ವಿಸ್ತರಣೆಯಾಗಿದೆ.

ಟರ್ಮಿನಲ್ಗಳಾದ ನಾಗಸಂದ್ರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ ಹಾಗೂ ವೈಟ್ಫಿಲ್ಡ್ನಿಂದ ಶುಕ್ರವಾರ ಕೊನೆಯ ರೈಲು ರಾತ್ರಿ 11:55ಕ್ಕೆ ಹೊರಡಲಿದೆ (ಪ್ರತಿದಿನ 11:15) ಎಂದು ಬಿಎಂಆರ್ಸಿಎಲ್ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ಮೆಜೆಸ್ಟಿಕ್ (ನಾಡಪ್ರಭು ಕೆಂಪೇಗೌಡ ನಿಲ್ದಾಣ) ನಿಂದ ಕೊನೆಯ ರೈಲುಗಳು ನಾಲ್ಕೂ ಕಡೆಗೆ ಮಧ್ಯರಾತ್ರಿ 12:35ಕ್ಕೆ ಹೊರಡಲಿವೆ. ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಎರಡನೇ ಹಂತದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.