ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ | ಮಾರ್ಚ್‌ 11ರ ಬಳಿಕ ಎರಡನೇ ಪಟ್ಟಿ: ಡಿ.ಕೆ. ಶಿವಕುಮಾರ್‌

Published 8 ಮಾರ್ಚ್ 2024, 15:59 IST
Last Updated 8 ಮಾರ್ಚ್ 2024, 15:59 IST
ಅಕ್ಷರ ಗಾತ್ರ

ಬೆಂಗಳೂರು: ‘ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆಗೆ ನೇಮಿಸಿರುವ ‘ಸ್ಕ್ರೀನಿಂಗ್‌ ಸಮಿತಿ’ ಸೋಮವಾರ (ಮಾರ್ಚ್‌ 11) ಸಭೆ ನಡೆಸಲಿದೆ. ಆ ಬಳಿಕ ನಮ್ಮ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಆಗಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ಇನ್ನೂ ಹಲವರ ಹೆಸರುಗಳು ಸ್ಕ್ರೀನಿಂಗ್ ಸಮಿತಿಯ ಪರಿಶೀಲನೆಯಲ್ಲಿವೆ. ಸೋಮವಾರದ ಸಭೆಯಲ್ಲಿ ಮತ್ತಷ್ಟು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳ್ಳಲಿದೆ’ ಎಂದರು.

‘ಸ್ಥಳೀಯ ಶಾಸಕರು, ವಿಧಾನಸಭಾ ಚುನಾವಣೆಯಲ್ಲಿ ಸೋತಿರುವವರು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಅಭಿಪ್ರಾಯ ಕೇಳಿದ್ದೇವೆ. ಅವರೆಲ್ಲರೂ ಯಾರ ಹೆಸರು ಹೇಳಿದ್ದಾರೋ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT