ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭಾ ಚುನಾವಣೆ: ಹಿನ್ನಡೆಗೆ ಒಬ್ಬರನ್ನು ಹೊಣೆ ಮಾಡುವುದು ಸಾಧ್ಯವಿಲ್ಲ- MB ಪಾಟೀಲ

Published 8 ಜೂನ್ 2024, 16:08 IST
Last Updated 8 ಜೂನ್ 2024, 16:08 IST
ಅಕ್ಷರ ಗಾತ್ರ

ಬೆಂಗಳೂರು: ‘ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಯಾರೊ ಒಬ್ಬರನ್ನು ಹೊಣೆ ಮಾಡುವುದು ಸಾಧ್ಯವಿಲ್ಲ’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‌‘ಹಿನ್ನಡೆಗೆ ಕಾರಣಗಳೇನು ಎಂದು ಕಾಂಗ್ರೆಸ್ ಪಕ್ಷವು ಆತ್ಮಾವಲೋಕನ ಮಾಡಿಕೊಳ್ಳಲಿದೆ. ಪಕ್ಷದ ಮುಂದಿನ ಕಾರ್ಯತಂತ್ರ ಏನಿರಬೇಕು ಎಂದಷ್ಟೇ ಚಿಂತಿಸಲಾಗುವುದು' ಎಂದರು.

‘ಕಳೆದ ಒಂದು ವರ್ಷದಲ್ಲಿ ರಾಜ್ಯ ಸರ್ಕಾರವು ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು, ಜನರಿಗೆ ಅದರ ಲಾಭ ಸಿಗುವಂತೆ ಮಾಡಿತ್ತು. ಆದರೂ ನಾವು ಎಡವಿದ್ದೆಲ್ಲಿ ಎನ್ನುವುದನ್ನು ಕಂಡುಕೊಳ್ಳಲಿದ್ದೇವೆ. ಗೆಲ್ಲಬಹುದಾಗಿದ್ದ ಕೆಲವು ಕ್ಷೇತ್ರಗಳು ಕೈಜಾರಿರುವುದು ನಮಗೆ ಗೊತ್ತಾಗಿದೆ’ ಎಂದರು.

‘ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ ಆಗುತ್ತಿದ್ದಾರೆ. ಕಳೆದ ಎರಡು ಬಾರಿಗಿಂತ ಈ ಬಾರಿ ಬಿಜೆಪಿ ಬಲ ಕುಸಿದಿದೆ. ಹೀಗಾಗಿ, ಈ ಬಾರಿ ಅವರ ಸರ್ಕಾರ ಎಷ್ಟು ದಿನ ಇರುತ್ತದೆಂದು ಹೇಳಲು ಸಾಧ್ಯವಿಲ್ಲ. ಅದರಲ್ಲೂ ನಿತೀಶ್ ಕುಮಾರ್ ಅವರಂತಹ ವ್ಯಕ್ತಿಯನ್ನು ಇಟ್ಟುಕೊಂಡು ಸರ್ಕಾರ ನಡೆಸುವುದು ಎಷ್ಟು ಕಷ್ಟ ಎನ್ನುವುದು ನಮಗೆ ಗೊತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT