ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS polls: ಬೆಂಗಳೂರಲ್ಲಿ 8,984 ಮತಗಟ್ಟೆಗಳಿಗೆ 43 ಸಾವಿರ ಸಿಬ್ಬಂದಿ

Published 13 ಏಪ್ರಿಲ್ 2024, 23:30 IST
Last Updated 13 ಏಪ್ರಿಲ್ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ನಗರ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿರುವ ಒಟ್ಟಾರೆ 8,984 ಮತಗಟ್ಟೆಗಳಿಗೆ 43,123 ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳಲ್ಲಿ 24 ವಿಧಾನಸಭಾ ಕ್ಷೇತ್ರಗಳಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಒಂದು ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿವೆ.

ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಮತಗಟ್ಟೆ ಸಿಬ್ಬಂದಿಯ ಎರಡನೇ ಹಂತದ ‘ರ‍್ಯಾಂಡಮೈಸೇಷನ್’ ಅನ್ನು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ಸಾಮಾನ್ಯ ವೀಕ್ಷಕರ ಸಮ್ಮುಖದಲ್ಲಿ ಶನಿವಾರ ನಡೆಸಿದರು.

ನಿಯೋಜನೆಯಾಗಿರುವ ಮತಗಟ್ಟೆ ಅಧಿಕಾರಿಗಳಿಗೆ ಏಪ್ರಿಲ್‌ 17ರಂದು ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿಗದಿಪಡಿಸಿರುವ ಸ್ಥಳಗಳಲ್ಲಿ ಬೆಳಿಗ್ಗೆ 9.30ರಿಂದ ಎರಡನೇ ಹಂತದ ತರಬೇತಿ ನಡೆಸಲು ನೀಡಲು ನಿರ್ಧರಿಸಲಾಗಿದೆ. ಏಪ್ರಿಲ್‌ 24ರಂದು ಅಂತಿಮ ಹಂತದ ‘ರ‍್ಯಾಂಡಮೈಸೇಷನ್’ ನಡೆಸಲಾಗುತ್ತದೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕ ಮಕರಂದ್ ಪಾಂಡುರಂಗ, ಉತ್ತದ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಗಾಯತ್ರಿ ರಾಥೋರ್, ಕೇಂದ್ರ ಲೋಕಸಭಾ ಕ್ಷೇತ್ರದ
ಸಾಮಾನ್ಯ ವೀಕ್ಷಕರಾದ ವಾಣಿ ಮೋಹನ್ ಹಾಗೂ ಎಂಸಿಸಿ ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್, ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಚುನಾವಣಾಧಿಕಾರಿಗಳಾದ ಡಾ. ಹರೀಶ್
ಕುಮಾರ್, ಕೆ.ಎ ದಯಾನಂದ್, ವಿನೋತ್ ಪ್ರಿಯಾ, ಸಹಾಯಕ ಆಯುಕ್ತರಾದ ರವಿಚಂದ್ರ ನಾಯ್ಕ್, ಜಿಲ್ಲಾಮಟ್ಟದ ಮಾನವ ಸಂಪನ್ಮೂಲ ನೋಡಲ್ ಅಧಿಕಾರಿ ಅಶೋಕ್, ಸಿಬ್ಬಂದಿ ಇದ್ದರು.

ಮಲಬಾರ್‌ ಆಭರಣ ಹಿಂದಿರುಗಿಸಿದ ಅಧಿಕಾರಿಗಳು

ರಾಮನಗರ: ತಾಲ್ಲೂಕಿನ ಹೆಜ್ಜಾಲ ಬಳಿಯ ಚೆಕ್‌ಪೋಸ್ಟ್‌ನಲ್ಲಿ ಶನಿವಾರ ವಶಕ್ಕೆ ಪಡೆದಿದ್ದ ಮಲಬಾರ್ ಗೋಲ್ಡ್ ಕಂಪನಿಗೆ ಸೇರಿದ್ದ ₹19 ಕೋಟಿ ಮೌಲ್ಯದ 29 ಕೆ.ಜಿ ಚಿನ್ನಾಭರಣ ಮತ್ತು 28 ಕೆ.ಜಿ ಬೆಳ್ಳಿ ಆಭರಣಗಳನ್ನು ಚುನಾವಣಾ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ ಬಳಿಕ ಹಿಂದಿರುಗಿಸಿದ್ದಾರೆ.

ಕಂಪನಿಯು ಮೈಸೂರಿನಲ್ಲಿರುವ ತನ್ನ ಮಳಿಗೆಗಳಿಗೆ ವಿತರಿಸಲು ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಸೂಕ್ತ ದಾಖಲೆಗಳೊಂದಿಗೆ ಕೊಂಡೊಯ್ಯುತ್ತಿತ್ತು. ಚೆಕ್‌ಪೋಸ್ಟ್‌ನಲ್ಲಿ ವಾಹನ ತಡೆದ ಚುನಾವಣಾ ಸಿಬ್ಬಂದಿ ತಪಾಸಣೆ ನಡೆಸಿದ್ದರು. ಕಂಪನಿಯ ಸಿಬ್ಬಂದಿ ತೋರಿಸಿದ ದಾಖಲೆಗಳನ್ನು ಪರಿಶೀಲಿಸಿದ ಅಧಿಕಾರಿಗಳು, ಎಲ್ಲವೂ ಸರಿ ಇದ್ದಿದ್ದರಿಂದ ವಾಹನ ಬಿಟ್ಟು ಕಳಿಸಿದ್ದಾರೆ ಎಂದು ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ ಕಂಪನಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT