ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ: ಮತದಾನ ಜಾಗೃತಿಗೆ ಸೈಕಲ್ ಜಾಥಾ

Published 11 ಏಪ್ರಿಲ್ 2024, 21:30 IST
Last Updated 11 ಏಪ್ರಿಲ್ 2024, 21:30 IST
ಅಕ್ಷರ ಗಾತ್ರ

ಬೆಂಗಳೂರು: ‘ಮತದಾರರು ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸಬೇಕು. ಮತದಾನ ನಮ್ಮ ಕರ್ತವ್ಯ, ನಮ್ಮ ಜವಾಬ್ದಾರಿ’ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ಹೇಳಿದರು.

ಲೋಕಸಭಾ ಚುನಾವಣೆಯ ಅಂಗವಾಗಿ ಚುನಾವಣಾ ಆಯೋಗ, ಬಿಬಿಎಂಪಿ ಹಾಗೂ ಯೂನಿಯನ್ ಬ್ಯಾಂಕ್ ಸಹಯೋಗದಲ್ಲಿ ಮತದಾನದ ಜಾಗೃತಿಗಾಗಿ ವಿಧಾನಸೌಧದ ಮುಂಭಾಗ ಗುರುವಾರ ಹಮ್ಮಿಕೊಂಡಿದ್ದ ಸೈಕಲ್‌ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಏಪ್ರಿಲ್ 26 ರಂದು ನಡೆಯುವ ಮತದಾನದ ಹಬ್ಬವನ್ನು ಎಲ್ಲರೂ ಸೇರಿ ಒಟ್ಟಾಗಿ ಆಚರಿಸೋಣ. ಮತ ಚಲಾಯಿಸಲು ಅರ್ಹರಿರುವ ಎಲ್ಲರೂ ತಪ್ಪದೆ ಮತ ಚಲಾಯಿಸೋಣ’ ಎಂದರು.

ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮ ಹಾಗೂ ಜಾಥಾಗಳನ್ನು ಹಮ್ಮಿಕೊಳ್ಳುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ವಿಧಾನಸೌಧದ ಮುಂಭಾಗದಿಂದ, ಕೆ.ಆರ್ ವೃತ್ತದ ನೃಪತುಂಗ ರಸ್ತೆಯ ಮೂಲಕ ಸಾಗಿದ ಸೈಕಲ್‌ ಜಾಥಾ ಹಡ್ಸನ್ ವೃತ್ತ, ಕಸ್ತೂರ್ ಬಾ ರಸ್ತೆ, ಕ್ವೀನ್ಸ್ ರಸ್ತೆಯಿಂದ (ಚಿನ್ನಸ್ವಾಮಿ ಕ್ರೀಡಾಂಗಣ) ಡಾ. ಬಿ.ಆರ್‌.ಅಂಬೇಡ್ಕರ್ ರಸ್ತೆಯ ಮೂಲಕ ವಿಧಾನಸೌಧ ಪೂರ್ವ ದ್ವಾರದ ಬಳಿ ಮುಕ್ತಾಯಗೊಂಡಿತು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಕಾಂತರಾಜು, ಸ್ವೀಪ್ ನೋಡಲ್ ಅಧಿಕಾರಿ ಪ್ರತಿಭಾ, ಚುನಾವಣಾ ರಾಯಭಾರಿಗಳಾದ ಅನೂಪ್ ಶ್ರೀಧರ್, ನೀತು ವನಜಾಕ್ಷಿ, ಎನ್.ಎಸ್.ಎಸ್ ವಿದ್ಯಾರ್ಥಿಗಳು, ಸೈಕ್ಲಿಸ್ಟ್‌ಗಳು
ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT