ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಆದಾಯಕ್ಕಿಂತ ಹೆಚ್ಚಿನ ಆಸ್ತಿ: ಆರು ಮಂದಿ ಮೇಲೆ ‘ಲೋಕಾ’ ಪ್ರಹಾರ

Published 9 ಜನವರಿ 2024, 16:21 IST
Last Updated 9 ಜನವರಿ 2024, 16:21 IST
ಅಕ್ಷರ ಗಾತ್ರ

ಬೆಂಗಳೂರು: ಘೋಷಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಐವರು ಸರ್ಕಾರಿ ಅಧಿಕಾರಿಗಳು ಹಾಗೂ ಒಬ್ಬ ಗ್ರಾಮ ಪಂಚಾಯಿತಿ ಸದಸ್ಯನ ಮನೆ, ಕಚೇರಿ, ಬೇನಾಮಿದಾರರ ಮನೆಗಳ ಮೇಲೆ ಮಂಗಳವಾರ ದಾಳಿಮಾಡಿ ಶೋಧ ನಡೆಸಿರುವ ಲೋಕಾಯುಕ್ತ ಪೊಲೀಸರು, ₹ 51.11 ಕೋಟಿ ಮೌಲ್ಯದ ಆಸ್ತಿಗಳನ್ನು ಪತ್ತೆಮಾಡಿದ್ದಾರೆ.

ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ.ಎಲ್‌. ನಾಗರಾಜ್‌, ಲೋಕೋಪಯೋಗಿ ಇಲಾಖೆಯ ಬೆಂಗಳೂರು ಕಟ್ಟಡಗಳ ವೃತ್ತದ ಸೂಪರಿಂಟೆಂಡಿಂಗ್‌ ಎಂಜಿನಿಯರ್‌ ಎನ್‌. ಸತೀಶ್‌ ಬಾಬು, ಆನೇಕಲ್‌ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಂಜೇಶ್‌ ಬಿ., ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮ ಪಂಚಾಯಿತಿಯ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಡಿ.ಎಂ. ಪದ್ಮನಾಭ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಆರ್‌ಐಡಿಎಲ್‌) ರಾಮನಗರ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ಸೈಯದ್‌ ಮುನೀರ್‌ ಅಹಮದ್ ಮತ್ತು ಬೆಂಗಳೂರು ದಕ್ಷಿಣ ತಾಲ್ಲೂಕಿನ ಚನ್ನೇನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಎಚ್‌.ಎಸ್‌. ಸುರೇಶ್‌ ದಾಳಿಗೊಳಗಾದವರು.

ಆರೋಪಿಗಳು, ಅವರ ಸಂಬಂಧಿಗಳು, ಬೇನಾಮಿಯಾಗಿ ಆಸ್ತಿ ಹೊಂದಿರುವವರಿಗೆ ಸೇರಿದ 35 ಸ್ಥಳಗಳ ಮೇಲೆ ಮಂಗಳವಾರ ಬೆಳಿಗ್ಗೆ ಏಕಕಾಲಕ್ಕೆ ದಾಳಿಮಾಡಿದ್ದು, ಇಡೀ ದಿನ ಶೋಧ ನಡೆಸಲಾಗಿದೆ.

ಲೋಕಾಯುಕ್ತದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್‌ ಕುಮಾರ್‌ ಠಾಕೂರ್‌ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಿವಿಧ ಜಿಲ್ಲೆಗಳ ಲೋಕಾಯುಕ್ತ ಪೊಲೀಸರು ಪಾಲ್ಗೊಂಡಿದ್ದರು. 35 ತಂಡಗಳನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT