ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಾಯುಕ್ತದಿಂದ ಎಫ್‌ಐಆರ್‌

ಆರ್‌ಟಿಒ ತನಿಖಾ ಠಾಣೆಗಳ ಅಕ್ರಮ
Last Updated 30 ಜನವರಿ 2023, 19:22 IST
ಅಕ್ಷರ ಗಾತ್ರ

ಬೆಂಗಳೂರು: ಸಾರಿಗೆ ಇಲಾಖೆ ರಾಜ್ಯದ ಗಡಿ ಜಿಲ್ಲೆಗಳಲ್ಲಿರುವ ಏಳು ತನಿಖಾ ಠಾಣೆಗಳಲ್ಲಿ ಭ್ರಷ್ಟಾಚಾರದ ಕುರಿತು ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಲು ಲೋಕಾಯುಕ್ತರು ಆದೇಶಿಸಿದ್ದು, ಈವರೆಗೆ ಐದು ಪ್ರಕರಣ ದಾಖಲಿಸಲಾಗಿದೆ.

ಭ್ರಷ್ಟಾಚಾರದ ಕುರಿತ ದೂರು ಆಧರಿಸಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌.ಪಾಟೀಲ ಅವರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರು. 2022ರ ಸೆ. 28ರಂದು ಕಾರ್ಯಾಚರಣೆ ನಡೆಸಿದ್ದು, ಲೋಕಾಯುಕ್ತ ಪೊಲೀಸರು ಬೆಂಗಳೂರಿನ ಅತ್ತಿಬೆಲೆ ತನಿಖಾ ಠಾಣೆಯಲ್ಲಿ ₹ 62,227 ಸೇರಿ ಅಕ್ರಮವಾಗಿ ಸಂಗ್ರಹಿಸಿದ್ದ ₹ 11.03 ಲಕ್ಷ ವಶಪಡಿಸಿಕೊಂಡಿದ್ದರು.

ಅತ್ತಿಬೆಲೆಯ ಮೋಟಾರು ವಾಹನ ನಿರೀಕ್ಷಕರಾದ ರಂಜಿತ್‌, ಲಕ್ಷ್ಮಿ ಮತ್ತು ಇತರ ನಾಲ್ವರ ವಿರುದ್ಧ ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT