ಬೆಂಗಳೂರು: ನಗರದ ಸೋಂಪುರ ಕೆರೆಗೆ ಕಲುಷಿತ ನೀರು ಹರಿಯುವುದನ್ನು ತಡೆಗಟ್ಟಲು ಶೀಘ್ರ ಕ್ರಮ ತೆಗೆದುಕೊಳ್ಳದೇ ಇದ್ದರೆ ಕಠಿಣ ಕ್ರಮಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಬಿಬಿಎಂಪಿ, ಬಿಡಿಎ ಮತ್ತು ಜಲಮಂಡಳಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಲೋಕಾಯುಕ್ತ ಕಚೇರಿಯಲ್ಲಿ ಶುಕ್ರವಾರ ನಡೆದ ವಿಚಾರಣೆಯಲ್ಲಿ ಬಿಬಿಎಂಪಿ, ಬಿಡಿಎ ಮತ್ತು ಜಲಮಂಡಳಿ ಅಧಿಕಾರಿಗಳು ಭಾಗಿಯಾಗಿದ್ದರು. ಇದೇ ಮೇ 13ರಂದು ನಡೆದಿದ್ದ ವಿಚಾರಣೆ ವೇಳೆ ಲೋಕಾಯುಕ್ತರು , ‘ಕೆರೆಗೆ ಕಲುಷಿತ ನೀರು ಹರಿಯುವುದನ್ನು ತಡೆಗಟ್ಟಲು ಇಂಟರ್ಮೀಡಿಯೇಟ್ ಪಂಪಿಂಗ್ ಸ್ಟೇಷನ್ ನಿರ್ಮಿಸಲು ಸ್ಥಳ ಗುರುತಿಸಿ’ ಎಂದು ಸೂಚಿಸಿದ್ದರು.

'ಈವರೆಗೂ ಸ್ಥಳ ಗುರುತಿಸಲು ಸಾಧ್ಯವಾಗಿಲ್ಲ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಇದರಿಂದ ತೀವ್ರ ಅಸಮಾಧಾನಗೊಂಡ ಲೋಕಾಯುಕ್ತರು, ‘2018ರಿಂದ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಹೀಗಿದ್ದರೂ ಸಮಸ್ಯೆ ಪೂರ್ಣ ಪ್ರಮಾಣದಲ್ಲಿ ಬಗೆಹರಿದಿಲ್ಲ’ ಎಂದು ಆಕ್ಷೇಪಿಸಿದರು.

‘ಪಂಪಿಂಗ್ ಸ್ಟೇಷನ್ ನಿರ್ಮಿಸಲು ತಕ್ಷಣವೇ ಸ್ಥಳಪರಿಶೀಲನೆ ನಡೆಸಿ, ಅಂತಿಮಗೊಳಿಸಿ. ಮುಂದಿನ ವಿಚಾರಣೆ ವೇಳೆಗೆ ಈ ಕೆಲಸ ಆಗದೇ ಇದ್ದರೆ, ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಆದೇಶಿಸಿದರು. ಆಗಸ್ಟ್ 22ಕ್ಕೆ ಮುಂದಿನ ವಿಚಾರಣೆ ನಿಗದಿ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.