ಮಂಗಳವಾರ, ಫೆಬ್ರವರಿ 18, 2020
26 °C

ರೌಡಿ ‘ಸ್ಮಶಾನ ಲೋಕಿ’ ಬರ್ಬರ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಾಮರಾಜಪೇಟೆ ಠಾಣೆ ವ್ಯಾಪ್ತಿಯ ಆಜಾದ್ ನಗರದಲ್ಲಿ ರೌಡಿ ಲೋಕೇಶ್ ಅಲಿಯಾಸ್ ಸ್ಮಶಾನ ಲೋಕಿ (35) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

‘ನಾಗರಬಾವಿ ನಿವಾಸಿಯಾಗಿದ್ದ ಲೋಕೇಶ್, ರೌಡಿ ಸೈಕಲ್ ರವಿಯ ಸಹಚರ. ತನ್ನ 19ನೇ ವಯಸ್ಸಿನಲ್ಲೇ ಕೊಲೆ ಪ್ರಕರಣವೊಂದರಲ್ಲಿ ಲೋಕೇಶ್ ಭಾಗಿಯಾಗಿದ್ದ. ಜೈಲು ಸೇರಿ ಇತ್ತೀಚೆಗಷ್ಟೇ ಬಿಡುಗಡೆ ಆಗಿದ್ದ’ ಎಂದು ಪೊಲೀಸರು ಹೇಳಿದರು.

‘ಬುಧವಾರ ರಾತ್ರಿ ಬೈಕ್‌ನಲ್ಲಿ ಹೊರಟಿದ್ದ ಲೋಕೇಶ್‌ನನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದಿದ್ದರು. ತೀವ್ರ ರಕ್ತಸ್ರಾವದಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಳೇ ದ್ವೇಷ ಹಾಗೂ ಯುವತಿಯೊಬ್ಬರ ವಿಚಾರಕ್ಕಾಗಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಎರಡೂ ಆಯಾಮದಲ್ಲಿ ತನಿಖೆ ಮುಂದುವರಿಸಲಾಗಿದೆ’ ಎಂದರು.‘ಸ್ಥಳೀಯವಾಗಿ ಫೈನಾನ್ಸ್ ಹಾಗೂ ಬಡ್ಡಿ ವ್ಯವಹಾರ ಮಾಡುತ್ತಿದ್ದ ಲೋಕೇಶ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು