ಬೆಂಗಳೂರು: ‘ಕೆ.ಜಿ. ಹಳ್ಳಿ ಗಲಭೆ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ವಿರುದ್ದ ಲುಕ್ ಔಟ್ ನೋಟಿಸ್ ಹೊರಡಿಸಲಾಗಿದೆ. ಅವರನ್ನು ಪತ್ತೆ ಹಚ್ಚಲು ಪೊಲೀಸರ ನಾಲ್ಕೈದು ವಿಶೇಷ ತಂಡಗಳನ್ನು ರಚಿಸಲಾಗಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ದೀಪಾವಳಿ ಹಬ್ಬದ ಕಾರಣಅಗ್ನಿ ಶಾಮಕ ದಳ ಹಾಗೂ ತುರ್ತುಸೇವೆ ವಾಹನಗಳಿಂದ ಹಸಿರು ಪಟಾಕಿ, ಅರ್ಥಪೂರ್ಣ ದೀಪಾವಳಿ ಆಚರಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಜಾಗೃತಿ ಜಾಥಾ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಸಂಪತ್ ರಾಜ್ ಹೊರದೇಶಕ್ಕೆ ಹೋಗಲು ಸಾಧ್ಯವಿಲ್ಲ. ಸಿಸಿಬಿ ಪೊಲೀಸರ ತಂಡ ಶೀಘ್ರ ಅವರನ್ನು ಬಂಧಿಸಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.