‘ಜಾಗ ನೋಡಿ ಕಾಲೇಜು ಸ್ಥಾಪನೆಗೆ ನಿರ್ಧಾರ’

7

‘ಜಾಗ ನೋಡಿ ಕಾಲೇಜು ಸ್ಥಾಪನೆಗೆ ನಿರ್ಧಾರ’

Published:
Updated:

ಬೆಂಗಳೂರು: ರಾಮನಗರದಲ್ಲಿ ವಸತಿಸಹಿತ ಪ್ರಥಮ ದರ್ಜೆ ಕಾಲೇಜು ಪ್ರಾರಂಭಿಸಲು ಜಿಲ್ಲೆಯ ಆನಮಾನಹಳ್ಳಿ, ಹರಿಸಂದ್ರ ಹಾಗೂ ಅಚ್ಚಲು ಗ್ರಾಮದಲ್ಲಿ ಗುರತಿಸಲಾಗಿರುವ 7 ಎಕರೆ ಜಾಗವನ್ನು ಪರಿಶೀಲಿಸಿದ ನಂತರ, ಕಾಲೇಜು ಸ್ಥಾಪನೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ರಾಮನಗರದಲ್ಲಿ ಹೊಸ ಕಾಲೇಜು ಪ್ರಾರಂಭಿಸುವ ಕುರಿತು ಶುಕ್ರವಾರ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ‘ಸುಸಜ್ಜಿತ ಕಟ್ಟಡ, ಶೌಚಾಲಯ, ನುರಿತ ಉಪನ್ಯಾಸಕರು ಸೇರಿದಂತೆ ಎಲ್ಲ ಅಗತ್ಯ ಸೌಕರ್ಯಗಳಿದ್ದಾಗ ಮಾತ್ರ ಸರ್ಕಾರಿ ಕಾಲೇಜುಗಳಿಗೆ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಬಹುದು. ಹೀಗಾಗಿ, ಕಟ್ಟಡಗಳ ನಿರ್ಮಾಣಕ್ಕೆ ಆದ್ಯತೆ ನೀಡಿ’ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಸಿಬಿಝಡ್ ಹಾಗೂ ಮೈಕ್ರೋ ಬಯಾಲಜಿ ಕೋರ್ಸ್‌ಗಳಿಗೆ ಬೇಡಿಕೆ ಇರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಪದವಿ ಕಾಲೇಜುಗಳಲ್ಲಿ ಆ ಕೋರ್ಸ್‌ಗಳನ್ನು ಪ್ರಾರಂಭಿಸಲು ಸೂಚಿಸಿದರು.

**

ರಾಜ್ಯದಲ್ಲಿ 102 ಕಾಲೇಜುಗಳಿಗೆ ಸ್ವಂತ ಕಟ್ಟಡ ಒದಗಿಸುವ ಚರ್ಚೆ ನಡೆದಿದೆ. ಉಪನ್ಯಾಸಕರ ಭರ್ತಿಗೂ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದೇವೆ.

-ಜಿ.ಟಿ.ದೇವೇಗೌಡ, ಉನ್ನತ ಶಿಕ್ಷಣ ಸಚಿವ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !