ಸೋಮವಾರ, ಸೆಪ್ಟೆಂಬರ್ 28, 2020
28 °C
ಮೊದಲ ಪತಿಯನ್ನು ಕೊಂದನಾ ಎರಡನೇ ಪತಿ?

ಬಸವನಗುಡಿ ವ್ಯಾಪ್ತಿಯಲ್ಲಿ ಲಾರಿ ಕ್ಲೀನರ್ ಮೃತದೇಹ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

praajavani

ಬೆಂಗಳೂರು: ಬಸವನಗುಡಿ ಠಾಣೆ ವ್ಯಾಪ್ತಿಯ ಸುಬ್ಬಣ್ಣ ಚೆಟ್ಟಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಸಿದ್ದರಾಜು (26) ಎಂಬುವರ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.

'ಕೊಳ್ಳೆಗಾಲದ ಸಿದ್ದರಾಜು, ಲಾರಿ ಕ್ಲೀನರ್ ಆಗಿದ್ದರು‌. ಅವರ ಮೃತದೇಹದ ಮೇಲೆ ಗಾಯದ ಗುರುತುಗಳಿದ್ದವು‌. ಸ್ಥಳೀಯರು ನೀಡಿದ ಮಾಹಿತಿಯಂತೆ ಪೊಲೀಸರು ಸ್ಥಳಕ್ಕೆ ಹೋಗಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ' ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ತಿಳಿಸಿದರು.

ಬಿಟ್ಟುಹೋಗಿದ್ದ ಪತ್ನಿ; 'ಸಿದ್ದರಾಜು ಅವರು ಹೂವು ಮಾರುವ ಲತಾ (28) ಎಂಬುವರನ್ನು ವರ್ಷದ ಹಿಂದೆ ಮದುವೆಯಾಗಿದ್ದರು. ಆದರೆ, ಕೌಟುಂಬಿಕ ಕಲಹದಿಂದ ದಂಪತಿ ಬೇರೆಯಾಗಿದ್ದರು' ಎಂದು ಪೊಲೀಸರು ಹೇಳಿದರು.

'ಸಿದ್ದರಾಜುನನ್ನು ಬಿಟ್ಟು ಹೋಗಿದ್ದ ಲತಾ, ಲಕ್ಷ್ಮಣ ಅಲಿಯಾಸ್ ಲಚ್ಚಿ ಎಂಬಾತನನ್ನು ಮದುವೆಯಾಗಿದ್ದಳು. ತಾಯಿಯ ಮನೆಯಲ್ಲಿ ಉಳಿದುಕೊಂಡಿದ್ದಳು. ಅದರಿಂದ ಸಿಟ್ಟಾಗಿದ್ದ ಸಿದ್ದರಾಜು, ಲತಾ ತವರು ಮನೆಗೆ ಹೋಗಿ ಗಲಾಟೆ ಮಾಡುತ್ತಿದ್ದ.'

'ಶುಕ್ರವಾರವೂ ಮನೆ ಬಳಿ ಹೋಗಿ ಗಲಾಟೆ ಮಾಡಿದ್ದ. ಲತಾ ಹಾಗೂ ಅವರ ತಾಯಿ ಮೇಲೆ ಹಲ್ಲೆಗೂ ಯತ್ನಿಸಿದ್ದ. ಇದು ಗೊತ್ತಾಗುತ್ತಿದ್ದಂತೆ ಲಕ್ಷ್ಮಣ, ಸಿದ್ದರಾಜುನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ' ಎಂದೂ ಪೊಲೀಸರು ತಿಳಿಸಿದರು.

'ಲಾರಿ ಬಳಿಯೇ ತಡರಾತ್ರಿ ಸಿದ್ದರಾಜು ಹಾಗೂ ಸ್ನೇಹಿತರು ಮದ್ಯ ಕುಡಿಯುತ್ತ ಕುಳಿತಿದ್ದರು. ಅಲ್ಲಿಗೆ ಬಂದಿದ್ದ ಲಕ್ಷ್ಮಣ, ಜಗಳ ತೆಗೆದು ಸಿದ್ದರಾಜುನನ್ನು ಕೊಂದು ಪರಾರಿಯಾಗಿದ್ದಾನೆ. ಈ ಸಂಬಂಧ ಬಸವನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ' ಎಂದೂ ವಿವರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು