ಬೆಂಗಳೂರು: ಡೀಸೆಲ್ ದರ ಏರಿಕೆಯನ್ನು ಖಂಡಿಸಿ, ಐದು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಏಪ್ರಿಲ್ 14ರ ರಾತ್ರಿಯಿಂದಲೇ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಲಾರಿ ಮಾಲೀಕರ ಹಾಗೂ ಏಜೆಂಟರ ಸಂಘ ಪ್ರಕಟಿಸಿದೆ.

ಜಲ್ಲಿ, ಮರಳು ಸಾಗಣೆ ವಾಹನಗಳು, ಗ್ಯಾಸ್ ಟ್ಯಾಂಕ್ ಮಾಲೀಕರ ಸಂಘ ಸಹಿತ 69 ಸಂಘಟನೆಗಳು ಮುಷ್ಕರ ಬೆಂಬಲಿಸಿವೆ. ರಾಜ್ಯದಲ್ಲಿ ಸುಮಾರು 700 ಗೂಡ್ಸ್ ಕಚೇರಿಗಳಿದ್ದು, ಬಂದ್ ಆಗಲಿವೆ. ಈ ಬಗ್ಗೆ ಕೈಗಾರಿಕೆ, ಕಾರ್ಖಾನೆ, ಕಂಪನಿಗಳಿಗೆ ಮುಷ್ಕರದ ಬಗ್ಗೆ ಪತ್ರ ಬರೆಯಲಾಗಿದೆ ಎಂದು ಸಂಘದ ಅಧ್ಯಕ್ಷ ಜಿ.ಆರ್.ಷಣ್ಮುಖಪ್ಪ ತಿಳಿಸಿದ್ದಾರೆ.

ಡೀಸೆಲ್ ದರವನ್ನು 2024ರ ಜೂನ್ನಲ್ಲಿ ₹ 3 ಏರಿಸಿದ್ದ ರಾಜ್ಯ ಸರ್ಕಾರ ಈಗ ಮತ್ತೆ ₹ 2 ಏರಿಸಿದೆ. ಈ ಏರಿಕೆ ಕೈಬಿಡುವವರೆಗೆ ಮುಷ್ಕರ ಕೈಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

‘ರಾಜ್ಯದಲ್ಲಿ 18 ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಿಸಲಾಗುತ್ತಿದೆ. ಬೇರೆ ಯಾವ ರಾಜ್ಯದಲ್ಲಿಯೂ ರಾಜ್ಯ ಹೆದ್ದಾರಿಗೆ ಟೋಲ್ ಇಲ್ಲ. ರಾಜ್ಯದಲ್ಲಿ ಟೋಲ್ ಸಂಗ್ರಹ ಕೈಬಿಡಬೇಕು. ಗಡಿ ಚೆಕ್ಪೋಸ್ಟ್ಗಳನ್ನು ರದ್ದುಮಾಡಬೇಕು. ವಾಹನಗಳ ಸಾಮರ್ಥ್ಯ ಅರ್ಹತಾ ಪತ್ರ (ಫಿಟ್ನೆಸ್ ಸರ್ಟಿಫಿಕೆಟ್) ನವೀಕರಣಕ್ಕೆ ಶುಲ್ಕವನ್ನು ಹೆಚ್ಚು ಮಾಡಿ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಅದನ್ನು ರಾಜ್ಯ ಸರ್ಕಾರ ಜಾರಿ ಮಾಡಬಾರದು. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಿಗೆ ಸರಕು ಸಾಗಣೆ ವಾಹನಗಳ ಪ್ರವೇಶವನ್ನು ನಿಷೇಧಿಸಿರುವುದು, ಕೇವಲ ಐದು ಗಂಟೆ ಅವಕಾಶ ನೀಡಿರುವುದನ್ನು ತೆಗೆದುಹಾಕಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಗಳಾಗಿವೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.