ಬೆಂಗಳೂರು: ಎಲ್ಪಿಜಿ ಸಿಲಿಂಡರ್ಗಳ ಕೊರತೆಯಿಂದಾಗಿ ಹೋಟೆಲ್ ಉದ್ಯಮದ ಜತೆಗೆ ಕರ್ನಾಟಕ ಹಾಲು ಮಹಾಮಂಡಳಿಯ ಹಾಲು ಮಾರಾಟದ ಮೇಲೂ ಪರಿಣಾಮ ಬೀರಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ವಾಣಿಜ್ಯ ಸಿಲಿಂಡರ್ಗಳ ಸರಬರಾಜು ಆಗದ ಕಾರಣ ಹೋಟೆಲ್ಗಳನ್ನು ಬಂದ್ ಮಾಡಲಾಗಿದೆ. ಇದರಿಂದಾಗಿ ಹಾಲಿನ ಮಾರಾಟದಲ್ಲೂ ವ್ಯತ್ಯಯವಾಗಿದೆ. ಮೊಸರು, ತುಪ್ಪಕ್ಕೂ ಸ್ವಲ್ಪಮಟ್ಟಿಗೆ ಬೇಡಿಕೆ ಕುಸಿದಿದೆ.

‘ಬೆಂಗಳೂರಿನಲ್ಲಿಯೇ ನಿತ್ಯ 21ರಿಂದ 22 ಲಕ್ಷ ಲೀಟರ್ ಹಾಗೂ ರಾಜ್ಯದ ಇತರೆಡೆ 48 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತಿತ್ತು. ಆದರೆ, ಹೋಟೆಲ್ಗಳ ಬಂದ್ನಿಂದಾಗಿ ಈಗ ನಿತ್ಯ 60 ಸಾವಿರ ಲೀಟರ್ ಹಾಲಿಗೆ ಬೇಡಿಕೆ ಕಡಿಮೆಯಾಗಿದೆ. ಬೇರೆ ಕಡೆ ಮಾರಾಟ ಮಾಡುವುದಕ್ಕೆ ಒತ್ತು ನೀಡಿದ್ದೇವೆ’ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.