ಬೆಂಗಳೂರು: ವಾಣಿಜ್ಯ ಹಾಗೂ ಗೃಹ ಬಳಕೆ ಎಲ್ಪಿಜಿ ಸಿಲಿಂಡರ್ ಅಭಾವ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು.

ಪಕ್ಷದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಗುಲಾಮಗಿರಿ ವಿದೇಶಾಂಗ ನೀತಿಯಿಂದಾಗಿ ದೇಶದ ಕೋಟ್ಯಂತರ ಜನರು ನಿರುದ್ಯೋಗಿಗಳಾಗುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿಯೂ ಇದೇ ರೀತಿಯ ಅವಾಂತರಕ್ಕೆ ತಳ್ಳಿದ್ದ ಕೇಂದ್ರ ಸರ್ಕಾರ, ಪ್ರತಿದಿನ ತಪ್ಪು ಹೆಜ್ಜೆಗಳನ್ನು ಇಡುತ್ತಾ ಜನಸಾಮಾನ್ಯರನ್ನು ದಾರಿ ತಪ್ಪಿಸುತ್ತಿದೆ. ಅಡುಗೆ ಅನಿಲ ಪೂರೈಕೆಯನ್ನು ಸರಾಗವಾಗಿ ಮಾಡದಿದ್ದಲ್ಲಿ ತೀವ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಸತೀಶ್ ಕುಮಾರ್ ಮಾತನಾಡಿ, ‘ಕಾಳಸಂತೆಯಲ್ಲಿ ದುಪಟ್ಟು ದರಕ್ಕೆ ಎಲ್ಪಿಜಿ ಸಿಲಿಂಡರ್ ಮಾರಾಟ ಮಾಡುತ್ತಿದ್ದರೂ ಕಡಿವಾಣ ಹಾಕುವಲ್ಲಿ ಸರ್ಕಾರ ವಿಫಲವಾಗಿದೆ’ ಎಂದರು.

ಪ್ರತಿಭಟನೆಯಲ್ಲಿ ರಾಜ್ಯ ಪ್ರಚಾರ ಸಮಿತಿಯ ಉಪಾಧ್ಯಕ್ಷ ಲಕ್ಷ್ಮೀಕಾಂತ ರಾವ್, ಉಪಾಧ್ಯಕ್ಷ ರುದ್ರಯ್ಯ ನವಲಿ ಮಠ, ಜಗದೀಶ್ ವಿ. ಸದಂ, ಲೋಹಿತ್ ಕುಮಾರ್ , ಉಷಾ ಮೋಹನ್, ಪುಷ್ಪ ಕೇಶವ್, ರವಿಕುಮಾರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.