ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

13ಕ್ಕೆ ರಾಹುಲ್‌ ಗಾಂಧಿ ಇಫ್ತಾರ್‌ ಕೂಟ

Last Updated 9 ಜೂನ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಎರಡು ವರ್ಷದ ಬಳಿಕ ಕಾಂಗ್ರೆಸ್‌ ಪಕ್ಷ ಇದೇ 13ರಂದು ಇಫ್ತಾರ್‌ ಕೂಟಕ್ಕೆ ತಯಾರಿ ನಡೆಸಿದ್ದು, ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ಇದನ್ನು ಆಯೋಜಿಸಿದ್ದಾರೆ. ಈ ಕೂಟದಲ್ಲಿ ವಿವಿಧ ಪಕ್ಷಗಳ ಮುಖಂಡರು ಹಾಗೂ ಗಣ್ಯರು ಪಾಲ್ಗೊಳ್ಳಲಿದ್ದಾರೆ.

‘ದೆಹಲಿಯ ತಾಜ್‌ ಪ್ಯಾಲೇಸ್‌ ಹೋಟೆಲ್‌ನಲ್ಲಿ ಇಫ್ತಾರ್‌ ಕೂಟ ನಡೆಯಲಿದೆ’ ಎಂದು ಕಾಂಗ್ರೆಸ್‌ನ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ನದೀಂ ಜಾವೇದ್ ತಿಳಿಸಿದರು.

2015ರಲ್ಲಿ ಕಾಂಗ್ರೆಸ್‌ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಅವರು ಇಫ್ತಾರ್ ಕೂಟ ಆಯೋಜಿಸಿದ್ದರು. ರಾಹುಲ್‌ ಗಾಂಧಿ ಪಕ್ಷದ ಅಧ್ಯಕ್ಷರಾದ ಬಳಿಕ ಆಯೋಜಿಸುತ್ತಿರುವ ಮೊದಲ ಇಫ್ತಾರ್‌ ಕೂಟ ಇದಾಗಿದೆ.

ಕಾರ್ಯಕ್ರಮಕ್ಕೆ ಎಲ್ಲ ಧರ್ಮದ ಮುಖಂಡರು, ಹಿರಿಯ ರಾಜತಾಂತ್ರಿಕರನ್ನು ಆಹ್ವಾನಿಸಲಾಗಿದೆ. ಮುಂದಿನ ಲೋಕಸಭಾ ಚುನಾವಣೆಗೆ ಎಲ್ಲ ವಿರೋಧ ಪಕ್ಷದ ನಾಯಕರನ್ನು ಕಾಂಗ್ರೆಸ್‌ ಒಗ್ಗೂಡಿಸುತ್ತಿರುವ ಕಾರಣದಿಂದ ಈ ಕಾರ್ಯಕ್ರಮವೂ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.

ರಾಷ್ಟ್ರಪತಿಭವನದಲ್ಲಿ ಪ್ರತಿವರ್ಷ ನಡೆಯುತ್ತಿದ್ದ ಇಫ್ತಾರ್‌ ಕೂಟವನ್ನು ಆಯೋಜಿಸದಿರಲು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ನಿರ್ಧರಿಸಿದ್ದರು. ಇದಾದ ಎರಡು ದಿನದ ಬಳಿಕ, ಕಾಂಗ್ರೆಸ್‌ ಪಕ್ಷ ಇಫ್ತಾರ್‌ ಆಯೋಜಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT