ಬೆಂಗಳೂರು: ರಾಜ್ಯ ಹಾಗೂ ಹೊರರಾಜ್ಯಗಳ ಸ್ಪಾಗಳಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.

ಮಹದೇವಪುರ ನಿವಾಸಿ ಅನಿಲ್ ಕುಮಾರ್ ಅಲಿಯಾಸ್ ಅನಿಲ್ ರೆಡ್ಡಿ(40) ಬಂಧಿತ ಆರೋಪಿ.

ಆರೋಪಿಯು ಹೊರರಾಜ್ಯ ಹಾಗೂ ವಿದೇಶಿ ಮಹಿಳೆಯರಿಗೆ ಸ್ಪಾಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, ಹೆಚ್ಚಿನ ಸಂಬಳದ ಆಮಿಷವೊಡ್ಡಿ ಅಕ್ರಮ ಬಂಧನದಲ್ಲಿ ಇರಿಸಿಕೊಂಡು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ. ಈತನ ಮಾನವ ಕಳ್ಳ ಸಾಗಣೆ ಹಾಗೂ ವೇಶ್ಯವಾಟಿಕೆ ದಂಧೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಗೂಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅನಿಲ್ ಕುಮಾರ್ ವಿರುದ್ಧ ಆಂಧ್ರಪ್ರದೇಶ ಹಾಗೂ ಮಹದೇವಪುರ ಪೊಲೀಸ್ ಠಾಣೆಗಳಲ್ಲಿ ಮಾನವ ಕಳ್ಳ ಸಾಗಣೆ, ಅತ್ಯಾಚಾರ ಸೇರಿದಂತೆ ನಾಲ್ಕು ಅಪರಾಧ ಪ್ರಕರಣಗಳು ದಾಖಲಾಗಿವೆ. ಆದರೂ ಈತ ವೃತ್ತಿಪರ ವೇಶ್ಯಾಗೃಹಗಳನ್ನು ನಡೆಸುವುದನ್ನು ಮುಂದುವರೆಸಿದ್ದ. ಹಾಗಾಗಿ ಮಹದೇವಪುರ ಠಾಣೆ ಪೊಲೀಸರು ಹಾಗೂ ಸಿಸಿಬಿ ಅಧಿಕಾರಿಗಳು ಆರೋಪಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ನಗರ ಪೊಲೀಸ್ ಕಮಿಷನರ್ಗೆ ಪ್ರಸ್ತಾವನೆ ಸಲ್ಲಿಸಿದ್ದರು. ಆರೋಪಿಯನ್ನು ಬಂಧಿಸಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.