ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂತ್ರಜ್ಞಾನ ಅಭಿವೃದ್ಧಿಯೇ ಆತ್ಮನಿರ್ಭರ ಭಾರತಕ್ಕೆ ಅಡಿಪಾಯ: ಎಂ.ವೆಂಕಯ್ಯನಾಯ್ಡು

Last Updated 30 ಡಿಸೆಂಬರ್ 2020, 22:29 IST
ಅಕ್ಷರ ಗಾತ್ರ

ಬೆಂಗಳೂರು: ‘ಭವಿಷ್ಯದ ಪೀಳಿಗೆಗೆ ಮೂಲಭೂತ ಸಂಶೋಧನೆ ಮತ್ತು ತಂತ್ರಜ್ಞಾನ ಅಭಿವೃದ್ಧಿ ಪಡಿಸುವುದೇ ಆತ್ಮನಿರ್ಭರ ಭಾರತಕ್ಕೆ ಅಡಿಪಾಯವಾಗಲಿದೆ’ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅಭಿಪ್ರಾಯಪಟ್ಟರು.

ಹೊಸಕೋಟೆಯಲ್ಲಿ ಭಾರತೀಯ ಖಭೌತ (ಆಸ್ಟ್ರೋಫಿಸಿಕ್ಸ್) ವಿಜ್ಞಾನ ಸಂಸ್ಥೆಯ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮತ್ತು ಶಿಕ್ಷಣ ಕೇಂದ್ರ (ಕ್ರೆಸ್ಟ್‌) ದಲ್ಲಿ ಪರೀಕ್ಷಾ ಸೌಲಭ್ಯ ಘಟಕಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಜನರ ಜೀವನವನ್ನು ಹಿತಕರವಾಗಿಸುವುದು ಮತ್ತು ಅವರ ಬದುಕಿನಲ್ಲಿ ಸಂತೋಷ ತರುವುದೇ ವಿಜ್ಞಾನದ ಅಂತಿಮ ಗುರಿಯಾಗಿದೆ’ ಎಂದರು.

‘ಖಭೌತ ವಿಜ್ಞಾನ ಸಂಸ್ಥೆಯ ಪರಿಸರ ಪರೀಕ್ಷಾ ಸೌಲಭ್ಯವು ಸಣ್ಣ ಪೇಲೋಡ್‌ಗಳನ್ನು ಬಾಹ್ಯಾಕಾಶಕ್ಕೆ ಸೇರಿಸಲು ನೆರವಾಗುತ್ತದೆ. ಸಣ್ಣ ಪೇಲೋಡ್‌ಗಳನ್ನು ಅಭಿವೃದ್ಧಿಪಡಿಸಲು ವಿಶ್ವವಿದ್ಯಾಲಯಗಳು ಮತ್ತು ಉದ್ಯಮಗಳು ಇದನ್ನುಮುಕ್ತವಾಗಿ ಬಳಸಬಹುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT