ಬುಧವಾರ, ಆಗಸ್ಟ್ 21, 2019
22 °C

ತಿಮ್ಮಕ್ಕ ಸಹಿತ ಐವರಿಗೆ ಮಡಿವಾಳ ಮಾಚಿದೇವ ಪ್ರಶಸ್ತಿ

Published:
Updated:

ಬೆಂಗಳೂರು: ಸಾಲುಮರದ ತಿಮ್ಮಕ್ಕ, ರಂಗಭೂಮಿ ಕಲಾವಿದ ಅಪ್ಪಣ್ಣ, ಸಮಾಜ ಸೇವಕ ಕೃಷ್ಣಪ್ಪ, ರಂಗಭೂಮಿ ಕಲಾವಿದ ಕೆ.ಪಿ.ಅಶ್ವತ್ಥ್‌ ನಾರಾಯಣ್, ಜಾನಪದ ಕಂಸಾಳೆ ಕಲಾವಿದ ಎಂ.ಲಿಂಗಯ್ಯ ಸೇರಿದಂತೆ ಐವರನ್ನು ’ಕರ್ನಾಟಕ ರಾಜ್ಯ ಮಡಿವಾಳರ ಕ್ಷೇಮಾಭಿವೃದ್ದಿ ಸಂಘ’ದ ವತಿಯಿಂದ ನೀಡುವ ಮಡಿವಾಳ ಮಾಚಿದೇವರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಸಂಘದ ಅಧ್ಯಕ್ಷ ಅಧ್ಯಕ್ಷ ಆರ್.ವೆಂಕಟರಮಣ, ‘ರಾಜಾಜಿನಗರದ ಡಾ.ರಾಜ್ ಕುಮಾರ್ ಕಲಾಕ್ಷೇತ್ರದಲ್ಲಿ ಆ.11ರಂದು ಬೆಳಿಗ್ಗೆ 10.30ಕ್ಕೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಶಾಸಕ ಎಸ್.ಸುರೇಶ್ ಕುಮಾರ್ ಭಾಗವಹಿಸಲಿದ್ದಾರೆ. ಮಾಚಿದೇವ ಶಿವಯೋಗಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ’ ಎಂದರು.

‘ಎಸ್ಸೆಸ್ಸೆಲ್ಸಿ, ಪಿಯು.ಸಿ ಹಾಗೂ ಪದವಿ ಪರೀಕ್ಷೆಗಳಲ್ಲಿ ಶೇ 75ಕ್ಕಿಂತ ಹೆಚ್ಚು ಅಂಕ ಪಡೆದ 126 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಪ್ರತಿ ವಿಭಾಗದಲ್ಲಿ ಗರಿಷ್ಠ ಅಂಕ ಗಳಿಸಿದ ತಲಾ ಆರು ಮಂದಿಗೆ ₹ 3000 ಹಾಗೂ ಉಳಿದ ವಿದ್ಯಾರ್ಥಿಗಳಿಗೆ ₹ 750 ಸಹಾಯಧನ ನೀಡಲಾಗುವುದು’ ಎಂದು ತಿಳಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ವಿ.ದೀಪಕ್, ‘ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು’ ಎಂದು ಒತ್ತಾಯಿಸಿದರು. 

 

Post Comments (+)