ಶನಿವಾರ, ಜನವರಿ 29, 2022
22 °C

ರೈತರಿಂದ ಸುಲಿಗೆ: ಮೂವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎಪಿಎಂಸಿ ಮಾರುಕಟ್ಟೆಗಳಿಗೆ ಬರುವ ರೈತರು ಹಾಗೂ ವರ್ತಕರನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಾದನಾಯಕನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. 

‘ಜಾನ್ಸನ್‌, ರಾಜ ಹಾಗೂ ಸತ್ಯವೇಲು ಬಂಧಿತರು. ಮುಂಜಾನೆ ಸಮಯದಲ್ಲಿ ಎಪಿಎಂಸಿ ಮಾರುಕಟ್ಟೆಗೆ ಬರುತ್ತಿದ್ದ ರೈತರು ಹಾಗೂ ವರ್ತಕರನ್ನು ಮಾರಕಾಸ್ತ್ರಗಳಿಂದ ಬೆದರಿಸುತ್ತಿದ್ದ ಆರೋಪಿಗಳು ಆಭರಣ ಹಾಗೂ ಹಣ ಲ‍ಪಟಾಯಿಸಿ ಪರಾರಿಯಾಗುತ್ತಿದ್ದರು. ಇವರ ಕೃತ್ಯಕ್ಕೆ ಸಹಕರಿಸಿದ್ದ ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದ್ದಾರೆ.  

‘ಆರೋಪಿಗಳು ಪಿಳ್ಳಳ್ಳಿ ಮಾರುಕಟ್ಟೆಯಲ್ಲಿ ಕಳ್ಳತನಕ್ಕೆ ಸಂಚು ರೂಪಿಸುತ್ತಿದ್ದರು. ಈ ವೇಳೆ ದಾಳಿ ನಡೆಸಿ ಮೂವರನ್ನು ಬಂಧಿಸಲಾಗಿದೆ. ಅವರಿಂದ ಕೃತ್ಯಕ್ಕೆ ಬಳಸಿದ್ದ ಆಟೊ, ಚಾಕು ಹಾಗೂ ಮಚ್ಚು ಜಪ್ತಿ ಮಾಡಲಾಗಿದೆ’ ಎಂದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು