ಬೆಂಗಳೂರು: ‘ಪರಿಶಿಷ್ಟ ಜಾತಿಯ ಒಳ ಮೀಸಲಾತಿಯನ್ನು ಜಾರಿಗೊಳಿಸದೇ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಡಬೇಕು’ ಎಂದು ಕರ್ನಾಟಕ ರಾಜ್ಯ ಮಾದಿಗ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳ ಹಿತ ಕಾಪಾಡದ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರು ರಾಜೀನಾಮೆ ನೀಡಬೇಕು. ನಮ್ಮ ಸಮುದಾಯದ ನಾಯಕರಾದ ಸಚಿವ ಕೆ.ಎಚ್. ಮುನಿಯಪ್ಪ ಅವರ ವಿರೋಧದ ನಡುವೆಯೂ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೊಳಿಸದೇ ವಿವಿಧ ಹುದ್ದೆಗಳ ನೇಮಕಾತಿಗೆ ತೀರ್ಮಾನಿಸಿ, ಆದೇಶ ಹೊರಡಿಸಿರುವ ಸರ್ಕಾರದ ನಿರ್ಧಾರ ಖಂಡನೀಯ’ ಎಂದು ತಿಳಿಸಿದೆ.

‘ದೇಶದ ವಿವಿಧ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆ ಮಾಡಲಾಗಿದೆ. ಅದೇ ರೀತಿ ನಮ್ಮ ರಾಜ್ಯದಲ್ಲಿ 2022ರಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಮಾಣವನ್ನು ಶೇಕಡ 15ರಿಂದ 17ಕ್ಕೆ ಹೆಚ್ಚಿಸಲಾಗಿದೆ. ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ 3ರಿಂದ 7ಕ್ಕೆ ಹೆಚ್ಚಿಸಲಾಗಿದ್ದು, ಅದರಂತೆಯೇ ನೇಮಕಾತಿ ಮಾಡಬೇಕು’ ಎಂದು ಒತ್ತಾಯಿಸಿದೆ.

‘ರಾಜ್ಯ ಸರ್ಕಾರ ಕೂಡಲೇ ವಿಶೇಷ ಸಚಿವ ಸಂಪುಟ ಸಭೆ ಕರೆದು ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗದ ಶಿಫಾರಸಿನಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿಯ ಪ್ರಮಾಣವನ್ನು ಹಂಚಿಕೆ ಮಾಡಬೇಕು. ಫೆ. 27ರಂದು ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂಪಡೆದು ಪರಿಷ್ಕೃತ ರೋಸ್ಟರ್ ಬಿಂದುಗಳನ್ನು ಗುರುತಿಸಬೇಕು. ಆ ಬಳಿಕವೇ 56,432 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಬೇಕು’ ಎಂದು ತಿಳಿಸಿದೆ.

‘ಶಿಕ್ಷಣ, ಉದ್ಯೋಗ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಒಳ ಮೀಸಲಾತಿಯನ್ನು ಹಂಚಿಕೆ ಮಾಡಿ, ಅನುಷ್ಠಾನಗೊಳಿಸಬೇಕು’ ಎಂದು ಆಗ್ರಹಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.