ಬೆಂಗಳೂರು: ಒಳಮೀಸಲಾತಿ ಜಾರಿಗೊಳಿಸಿ ಮೇ 8ರಂದು ಹೊರಡಿಸಿರುವ ಅಧಿಸೂಚನೆಯು ಕಾನೂನುಬಾಹಿರ, ಅವೈಜ್ಞಾನಿಕ ಹಾಗೂ ಗೊಂದಲದ ಗೂಡಾಗಿದ್ದು ಉದ್ದೇಶವೇ ವಿಫಲವಾಗಿದೆ ಎಂದು ಆರೋಪಿಸಿ, ಮಾದಿಗ ಸಂಘಟನೆಗಳ ಒಕ್ಕೂಟದ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

3ಕ್ಕಿಂತ ಕಡಿಮೆ ಹುದ್ದೆಗಳನ್ನು ಎಸ್.ಸಿ ಸಾಮಾನ್ಯ ಎಂದು ಪರಿಗಣಿಸುವ ಅವೈಜ್ಞಾನಿಕ ಷರತ್ತು ಹಿಂದಕ್ಕೆ ಪಡೆಯಬೇಕು. ಪರಿಶಿಷ್ಟ ಜಾತಿಗೆ ಮೀಸಲಾತಿ ಇರುವ ಕಡೆ ಒಳಮೀಸಲಾತಿ ಅಳವಡಿಸಿ ಆದೇಶಿಸಬೇಕು. ನಾಲ್ಕು ಆಯೋಗಗಳ ವರದಿಯ ಅಂಕಿಅಂಶಗಳನ್ನು ಪರಿಗಣಿಸಿ, ಜನಸಂಖ್ಯೆಗೆ ಅನುಗುಣವಾಗಿ ಮಾದಿಗ ಸಮುದಾಯಕ್ಕೆ ಶೇ 6 ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಸರ್ಕಾರದ ನೌಕರರಿಗೆ ಮುಂಬಡ್ತಿಯಲ್ಲಿ ಒಳಮೀಸಲಾತಿ ಅಳವಡಿಸಿ ಆದೇಶಿಸಬೇಕು. ಎಸ್ಸಿಎಸ್ಪಿ/ಟಿಎಸ್ಪಿಯ ₹49 ಸಾವಿರ ಕೋಟಿ ಅನುದಾನವನ್ನು ಒಳಮೀಸಲಾತಿ ಅನ್ವಯ ಹಂಚಿಕೆ ಮಾಡಬೇಕು ಎಂದು ಕೋರಿದರು.

ಮಾದಿಗ ಸಮುದಾಯಕ್ಕೆ ಪ್ರತ್ಯೇಕವಾಗಿ ಸಮಾಜ ಕಲ್ಯಾಣ ಇಲಾಖೆ ಇರಬೇಕು. ಅಲೆಮಾರಿ ಸಮುದಾಯುಗಳಿಗೆ ಶೇ 1 ಪ್ರತ್ಯೇಕ ಒಳಮೀಸಲಾತಿ ನೀಡಬೇಕು. ಅಲ್ಲದೇ ಪ್ರವರ್ಗ ‘ಎ’ ಎಂಬುದಾಗಿ ಪರಿಗಣಿಸಬೇಕು. ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಒದಗಿಸಬೇಕು. ರಾಜ್ಯ ಸರ್ಕಾರದ ವ್ಯಾಪ್ತಿಗೆ ಒಳಪಡುವ ಗುತ್ತಿಗೆ ಕಾಮಗಾರಿಗಳು, ಗುತ್ತಿಗೆ ಕಾರ್ಮಿಕರ ನೇಮಕಾತಿ, ತಾತ್ಕಾಲಿಕ ನೇಮಕಾತಿ, ಅತಿಥಿ ಉಪನ್ಯಾಸಕರ ನೇಮಕಾತಿ ಹಾಗೂ ಶಿಕ್ಷಕರ ನೇಮಕಾತಿಯಲ್ಲೂ ಒಳಮೀಸಲಾತಿ ಅಳವಡಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಪದವಿ ಕಾಲೇಜುಗಳಲ್ಲಿ 10,500 ಅತಿಥಿ ಉಪನ್ಯಾಸಕರ ನೇಮಕ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣಕ್ಕೆ 52 ಸಾವಿರ ಅತಿಥಿ ಶಿಕ್ಷಕರ ನೇಮಕ, ಪದವಿಪೂರ್ವ ಕಾಲೇಜಿನಲ್ಲಿ 5,910 ಅತಿಥಿ ಉಪನ್ಯಾಸಕರ ನೇಮಕಕ್ಕೆ ಆದೇಶಿಸಲಾಗಿದೆ. ಅಲ್ಲಿ ಒಳಮೀಸಲಾತಿಗೆ ಅವಕಾಶ ಕಲ್ಪಿಸಿಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು.

ಪ್ರತಿಭಟನೆಯಲ್ಲಿ ಆರ್ಪಿಐ ರಾಷ್ಟ್ರೀಯ ಅಧ್ಯಕ್ಷ ಎನ್.ಮೂರ್ತಿ, ಕರ್ನಾಟಕ ಮಾದಿಗ ದಂಡೋರದ ರಾಜ್ಯ ಅಧ್ಯಕ್ಷ ಶಂಕರಪ್ಪ, ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಗೌರವಾಧ್ಯಕ್ಷ ಕೇಶವಮೂರ್ತಿ, ವಿಶ್ವ ಆದಿಜಾಂಬವ ಮಹಾಸಭಾದ ರಾಜ್ಯ ಅಧ್ಯಕ್ಷ ಭೀಮರಾಜ್, ದೇವರಾಜ್ ಕೈವಾರ, ಕನಕೇನಹಳ್ಳಿ ಕೃಷ್ಣಪ್ಪ, ಲಿಂಗರಾಜ್ ಸೇರಿ ಹಲವರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.