ಬೆಂಗಳೂರು: ಪತ್ನಿಯನ್ನು ಗುಂಡಿಕ್ಕಿ ಕೊಲೆ ಮಾಡಿದ್ದ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಮಾಗಡಿ ಠಾಣೆ ಪೊಲೀಸರು, ಏಳು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ 495 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

2025ರ ಡಿ.23ರಂದು ಪತ್ನಿ ಭುವನೇಶ್ವರಿ (39) ಅವರ ಕೊಲೆ ಮಾಡಿದ್ದ ಆರೋಪದಡಿ ಪತಿ, ತಮಿಳುನಾಡಿನ ಸೆಲ್ವ ಬಾಲಮುರುಗನ್, ಸಹಚರರಾದ ಅಭಿಮನ್ಯು ಸಿಂಗ್, ಮೌಲೇಶ್ ಕುಮಾರ್, ಪೆರಿಯಾಸ್ವಾಮಿ ಅವರನ್ನು ಮಾಗಡಿ ಠಾಣೆಯ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ರಾಹುಲ್, ಹರೀಶ್ ಮತ್ತು ಸೂರ್ಯ ತಲೆಮರೆಸಿಕೊಂಡಿದ್ದಾರೆ. ಈ ಎಲ್ಲಾ ಆರೋಪಿಗಳ ವಿರುದ್ಧ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಕೊಲೆಯಾದ ಭುವನೇಶ್ವರಿ ಅವರು ಬ್ಯಾಂಕ್ವೊಂದರಲ್ಲಿ ಸಹಾಯಕ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದರು. ವೈಟ್ಫೀಲ್ಡ್ ಬಳಿ ಖಾಸಗಿ ಕಂಪನಿಯೊಂದರಲ್ಲಿ ಟೆಕಿಯಾಗಿ ಕೆಲಸ ಮಾಡುತ್ತಿದ್ದ ಪತಿ ಬಾಲಮುರುಗನ್ 13 ವರ್ಷಗಳ ಹಿಂದೆ ಭುವನೇಶ್ವರಿ ಅವರನ್ನು ಮದುವೆ ಆಗಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ದಂಪತಿ ಪ್ರತ್ಯೇಕವಾಗಿ ವಾಸವಾಗಿದ್ದರು. ಈ ಮಧ್ಯೆ ವಿಚ್ಛೇದನ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದ ಪತ್ನಿ, ಪತಿಗೆ ನೋಟಿಸ್ ಕಳುಹಿಸಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಜಗಳವಾಗಿತ್ತು. ಸಂಚು ರೂಪಿಸಿ ಡಿಸೆಂಬರ್ 23ರಂದು ಪತ್ನಿಗೆ ಗುಂಡಿಕ್ಕಿ ಕೊಲೆ ಮಾಡಿದ ಬಳಿಕ ಸೆಲ್ವ ಬಾಲಮುರುಗನ್ ಠಾಣೆಗೆ ಬಂದು ಶರಣಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.