ಶುಕ್ರವಾರ, ಜನವರಿ 27, 2023
19 °C

ಮಹದೇವಪುರದಲ್ಲಿ ಕಳ್ಳತನ: ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮಹದೇವಪುರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಆರೋಪದಡಿ ಚೇತನ್‌ಕುಮಾರ್ (23) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

‘ರಾಜಾಜಿನಗರ ಭೀಮಶಕ್ತಿನಗರದ ನಿವಾಸಿ ಎಸ್. ಚೇತನ್‌ಕುಮಾರ್ (23), 2021ರ ಅಕ್ಟೋಬರ್ 5ರಂದು ಕೃತ್ಯ ಎಸಗಿ ಪರಾರಿಯಾಗಿದ್ದ. ಸೂಕ್ತ ಪುರಾವೆಗಳನ್ನು ಸಂಗ್ರಹಿಸಿ
ಈತನನ್ನು ಬಂಧಿಸಲಾಗಿದೆ. ₹ 8 ಲಕ್ಷ ಮೌಲ್ಯದ 164 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಆರೋಪಿ ಚೇತನ್, ಸಹಚರರ ಜೊತೆ ಸೇರಿ ಕಳ್ಳತನ ಮಾಡುತ್ತಿದ್ದ. ಟಿನ್ ಫ್ಯಾಕ್ಟರಿ ಬಳಿ ಬಸ್ ಪ್ರಯಾಣಿಕರೊಬ್ಬರನ್ನು ಸುಲಿಗೆ ಮಾಡಿದ್ದ ಮಾಹಿತಿ ಇದೆ’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.