ಮಂಗಳವಾರ, ಜನವರಿ 18, 2022
26 °C

ಮಹದೇವಪುರ ವಲಯದಲ್ಲಿ ಸೋಂಕು ಗರಿಷ್ಠ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರದ 10ಕ್ಕೂ ಹೆಚ್ಚು ವಾರ್ಡ್‌ಗಳಲ್ಲಿ ನಿತ್ಯ ಸರಾಸರಿ 10ಕ್ಕೂ ಅಧಿಕ ಕೋವಿಡ್‌ ಪ್ರಕರಣಗಳು ಪತ್ತೆಯಾಗುತ್ತಿವೆ. ಇಂತಹ ವಾರ್ಡ್‌ಗಳ ಸಂಖ್ಯೆ ಮಹದೇವಪುರ ವಲಯದಲ್ಲೇ ಹೆಚ್ಚು.

ಗರಿಷ್ಠ ಪ್ರಮಾಣದಲ್ಲಿ ಕೋವಿಡ್ ಸೋಂಕು ಪತ್ತೆಯಾಗುತ್ತಿರುವ ಅಗ್ರ 10 ವಾರ್ಡ್‌ಗಳಲ್ಲಿ ಐದು ವಾರ್ಡ್‌ಗಳು ಮಹದೇವಪುರ ವಲಯದವು. ಇಲ್ಲಿನ ಬೆಳ್ಳಂದೂರು ವಾರ್ಡ್‌ನಲ್ಲಿ 10 ದಿನಗಳಿಂದೀಚೆಗೆ ನಿತ್ಯ ಸರಾಸರಿ 41ರಷ್ಟು ಪ್ರಕರಣಗಳು ಪತ್ತೆಯಾಗಿವೆ. ಕೋವಿಡ್‌ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದಂತೆಯೇ ಕೋವಿಡ್‌ ಪರೀಕ್ಷೆಗಳ ಪ್ರಮಾಣವನ್ನೂ ಬಿಬಿಎಂಪಿ ಗಣನೀಯವಾಗಿ ಹೆಚ್ಚಿಸಿದೆ.

‘ಕಳೆದ ವಾರ ನಿತ್ಯ 40 ಸಾವಿರದಿಂದ 45 ಸಾವಿರದಷ್ಟು ಮಂದಿಗೆ ಕೋವಿಡ್‌ ಪರೀಕ್ಷೆ ನಡೆಸುತ್ತಿದ್ದೆವು. ಈಗ ನಿತ್ಯ 75 ಸಾವಿರಕ್ಕೂ ಅಧಿಕ ಮಂದಿಯನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಬುಧವಾರ 80 ಸಾವಿರಕ್ಕೂ ಅಧಿಕ ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ’ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಡಾ.ಕೆ.ವಿ.ತ್ರಿಲೋಕಚಂದ್ರ ‘ಪ್ರಜಾವಾಣಿ’ಗೆ ತಿಳಿಸಿದರು.

ಸೋಮವಾರ 44,202 ಮಂದಿಯನ್ನು, ಮಂಗಳವಾರ 72,121 ಮಂದಿಯನ್ನು ಹಾಗೂ ಬುಧವಾರ 78,933 ಮಂದಿಯನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿದೆ.

ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡುವ ಪ್ರಕ್ರಿಯೆ ಆರಂಭವಾದ ಬಳಿಕ ನಿತ್ಯ ಲಸಿಕೆ ನೀಡುವಿಕೆಯ ಪ್ರಮಾಣವೂ ಹೆಚ್ಚಿದೆ. ಕಳೆದ ವಾರ ನಿತ್ಯ 15 ಸಾವಿರದಿಂದ 25 ಸಾವಿರ ಮಂದಿಗೆ ಲಸಿಕೆ ನೀಡಲಾಗುತ್ತಿತ್ತು. ನಗರದಲ್ಲಿ ಸೋಮವಾರ 55,381 ಮಂದಿಗೆ ಹಾಗೂ ಮಂಗಳವಾರ 64,518 ಮಂದಿಗೆ ಲಸಿಕೆ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು