ಬುಧವಾರ, ಆಗಸ್ಟ್ 4, 2021
26 °C

ಮಹಾಲಕ್ಷ್ಮಿ ಲೇಔಟ್: 250 ಹಾಸಿಗೆಗಳ ಆರೈಕೆ ಕೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಪ್ರಿಸ್ಟಿನ್‌ ಆಸ್ಪತ್ರೆಯ ಸಹಯೋಗದಲ್ಲಿ 250 ಹಾಸಿಗೆಗಳ ಕೋವಿಡ್‌ ಆರೈಕೆ ಕೇಂದ್ರ ಮತ್ತು ರಾಸಾಯನಿಕ ಸಿಂಪಡಣಾ ವಾಹನಗಳಿಗೆ ಸೋಮವಾರ ಚಾಲನೆ ನೀಡಲಾಯಿತು.

ಶಿಕ್ಷಣ ಸಚಿವ ಎಸ್‌.ಸುರೇಶ್ ಕುಮಾರ್ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಗೋಪಾಲಯ್ಯ ಉದ್ಘಾಟಿಸಿದರು.

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ವ್ಯಾಪ್ತಿಯಲ್ಲಿ ಕೊರೊನಾ ಪಾಸಿಟಿವ್ ಮತ್ತು ಇತರ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ನೀಡಲು ಅಗತ್ಯವಾದ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಜನ ಭಯಗೊಳ್ಳಬಾರದು ಎಂದು ಗೋಪಾಲಯ್ಯ ಕೇಳಿಕೊಂಡರು.

ಆಸ್ಪತ್ರೆಯ ಮುಖ್ಯ ವೈದ್ಯ ಡಾ.ಎಚ್.ಎಂ ಪ್ರಸನ್ನ ಮಾತನಾಡಿ, ‘ಸರ್ಕಾರ ಮತ್ತು ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಕೈಜೋಡಿಸಿ ಈ ರೋಗದಿಂದ ಬಳಲುತ್ತಿರುವವರಿಗೆ ಸಮರ್ಪಕ ಚಿಕಿತ್ಸೆ ನೀಡಲು ಅಗತ್ಯವಾದ ಎಲ್ಲಾ ನಿಯಮಗಳನ್ನು ಕೈಗೊಳ್ಳಲಾಗಿದೆ‘ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು