‘ಪ್ರತಿವರ್ಷ ಮಹಾಲಯ ಅಮಾವಾಸ್ಯೆಯ ಪಿತೃಪಕ್ಷ ಹಬ್ಬದಂದು ರಾಜ್ಯದ ಕೋಟ್ಯಂತರ ಜನರು ಮಾಂಸಹಾರವನ್ನು ಸಿದ್ಧಪಡಿಸಿ ತಮ್ಮ ಹಿರಿಯರಿಗೆ ಎಡೆ ಹಾಕಿ, ಪೂಜೆ ಮಾಡುತ್ತಾರೆ. ಬಂಧು ಬಳಗ, ಸ್ನೇಹಿತರೊಂದಿಗೆ ಸೇರಿ ಊಟ ಮಾಡುವುದರ ಮೂಲಕ ಹಬ್ಬವನ್ನಾಗಿ ಆಚರಿಸಲಾಗುತ್ತದೆ. ಕಾಕತಾಳೀಯವೆಂಬಂತೆ ಅದೇ ದಿನ ಗಾಂಧಿ ಜಯಂತಿ ಬಂದಿದೆ. ಅ. 2ರಂದು ಪ್ರಾಣಿ ವಧೆ ನಿಷೇಧಿಸಲಾಗಿದೆ. ಇದರಿಂದ, ಪಿತೃಪಕ್ಷ ಹಬ್ಬ ಆಚರಿಸುವವರಿಗೆ ಅಡಚಣೆ ಆಗಲಿದ್ದು, ಆ ದಿನ ಮಾಂಸ ಮಾರಾಟಕ್ಕೆ ಅವಕಾಶ ನೀಡಬೇಕು’ ಎಂದು ವೇದಿಕೆ ಅಧ್ಯಕ್ಷ ಬಿ.ಎಂ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ಆಗ್ರಹಿಸಿದ್ದಾರೆ.