ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ವಿದ್ಯಾರಣ್ಯಪುರದ ಎನ್ಟಿಐ ಮೈದಾನದಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ‘ಮಹಾಶಿವೋತ್ಸವ’ ಶೀರ್ಷಿಕೆಯಡಿ ಭಾನುವಾರ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಆಯೋಜಕಿ ಮೀನಾಕ್ಷಿ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ನೇತೃತ್ವದಲ್ಲಿ ಬ್ಯಾಟರಾಯನಪುರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೆಬಿಜಿ ಸ್ವಯಂಸೇವಕರ ಸಂಘದ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಭಾನುವಾರ ಬೆಳಿಗ್ಗೆ 10 ಗಂಟೆಗೆ ಶಿವಪೂಜೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, ದಿನವಿಡೀ ಪ್ರಸಾದ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ. ಕರಕುಶಲ ವಸ್ತುಗಳೂ ಸೇರಿ 50ಕ್ಕೂ ಹೆಚ್ಚು ವಿವಿಧ ಮಳಿಗೆಗಳು ಇರಲಿವೆ. ಮಧ್ಯಾಹ್ನ 3 ಗಂಟೆಗೆ ಸ್ಥಳೀಯ ಕಲಾವಿದರಿಗಾಗಿ ಶಾಸ್ತ್ರೀಯ ನೃತ್ಯ ಸ್ಪರ್ಧೆ, ಸಂಜೆ 6 ಗಂಟೆಗೆ ರುದ್ರವೇದಪಾರಾಯಣ ಹಾಗೂ 6.30ಕ್ಕೆ ದೃಷ್ಟಿ ಆರ್ಟ್ಸ್ ಸೆಂಟರ್ ವತಿಯಿಂದ ‘ಸತ್ಯಂ ಶಿವಂ ಸುಂದರಂ’ ಎಂಬ ನೃತ್ಯರೂಪಕ ನಾಟಕ ಪ್ರದರ್ಶನ ನಡೆಯಲಿದೆ. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.