ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾತ್ಮರ ಚರಿತಾಮೃತ ಗ್ರಂಥ ನಾಳೆ ಬಿಡುಗಡೆ

Last Updated 23 ಸೆಪ್ಟೆಂಬರ್ 2021, 22:43 IST
ಅಕ್ಷರ ಗಾತ್ರ

ಬೆಂಗಳೂರು: ಅಥಣಿಯ ಮೋಟಗಿಮಠದ ಪ್ರಭುಚನ್ನಬಸವ ಸ್ವಾಮೀಜಿ ರಚಿಸಿರುವ ‘ಮಹಾತ್ಮರ ಚರಿತಾಮೃತ’ ಗ್ರಂಥದ ಲೋಕಾರ್ಪಣೆ ಸೆ.25ರಂದು ನಗರದಲ್ಲಿ ನಡೆಯಲಿದೆ.

ಗುರುಚನ್ನಬಸವೇಶ್ವರ ಗ್ರಂಥಮಾಲೆಯಿಂದ ಪ್ರಕಟಗೊಂಡಿರುವ ಈ ಗ್ರಂಥ ಬಿಡುಗಡೆ ಕಾರ್ಯಕ್ರಮವನ್ನು ವಿಜಯನಗರದ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಬೆಳಿಗ್ಗೆ 10.30ಕ್ಕೆ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಉದ್ಘಾಟಿಸುವರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗ್ರಂಥ ಬಿಡುಗಡೆ ಮಾಡುವರು.

ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಎಡೆಯೂರು ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ, ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು, ಆದಿ ಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಭಾಲ್ಕಿಯ ಹಿರೇಮಠದ ಬಸವಲಿಂಗ ಪಟ್ಟದ್ದೇವರು, ಬೇಲಿಮಠದ ಶಿವರುದ್ರ ಸ್ವಾಮೀಜಿಗಳ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ.

ವಸತಿ ಸಚಿವ ವಿ. ಸೋಮಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ಎಸ್. ಪರಮಶಿವಯ್ಯ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅವರು ಗ್ರಂಥದ ಕುರಿತು ಮಾತನಾಡುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಬಸವ ವೇದಿಕೆ ಅಧ್ಯಕ್ಷ ಸಿ. ಸೋಮಶೇಖರ ಆಶಯ ನುಡಿಯಾಡುವರು.

‘ಗ್ರಂಥ ದಾಸೋಹಿಗಳಿಗೆ ಗೌರವ ಅಭಿನಂದನೆ, ಸಂಗೀತ ಸಂಭ್ರಮ, ಕೃತಿ ರೂಪುಗೊಳ್ಳಲು ಶ್ರಮಿಸಿದವರಿಗೆ ಸನ್ಮಾನ ಕಾರ್ಯಕ್ರಮಗಳು ನಡೆಯಲಿದೆ. ಕಾರ್ಯಕ್ರಮವನ್ನು ಫೇಸ್‌ಬುಕ್ ಮತ್ತು ಯೂಟ್ಯೂಬ್‌ನಲ್ಲಿ ‘ಬುಕ್‌ ಬ್ರಹ್ಮ’ ಸಂಸ್ಥೆ ನೇರ ಪ್ರಸಾರ ಮಾಡಲಿದೆ’ ಎಂದು ಎಂದು ಮಠ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT