ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮದ್ಯ ಮಾರಾಟದಲ್ಲಿ ಎಡವಿದ ಸರ್ಕಾರ’

Last Updated 8 ಮೇ 2020, 20:02 IST
ಅಕ್ಷರ ಗಾತ್ರ

ಬೆಂಗಳೂರು: ‘ಮದ್ಯದಂಗಡಿ ತೆರೆಯುವ ವಿಷಯದಲ್ಲಿ ಸರ್ಕಾರ ಎಡವಿದೆ. ಕೆಂಪು ವಲಯದಲ್ಲೂ ಮದ್ಯದಂಗಡಿ ತೆರೆಯಲು ಅವಕಾಶ ನೀಡಿದ್ದು ತಪ್ಪು’ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹೇಳಿದರು.

ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು,‘ರಾಜ್ಯದ ಆರ್ಥಿಕ ಸಂಕಷ್ಟ ನೋಡಿಕೊಂಡು ಮದ್ಯದಂಗಡಿ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಇದರಿಂದ ಅದೆಷ್ಟೋ ಕುಟುಂಬಗಳು ಬೀದಿಪಾಲಾಗುತ್ತಿವೆ. ಮದ್ಯದಂಗಡಿ ತೆರೆಯಲು ಅವಕಾಶ ನೀಡಿದ ಬಳಿಕ ಲಾಕ್‌ಡೌನ್‌ ಸಂಪೂರ್ಣ ಜಾರಿಯಾಗುತ್ತಿಲ್ಲ’ ಎಂದರು.

‘ಅಂಗನವಾಡಿ ಕೇಂದ್ರಗಳಲ್ಲಿ ವಿತರಿಸುವ ಆಹಾರ ಸಾಮಗ್ರಿಗಳನ್ನು ದುರ್ಬಳಕೆ ಮಾಡಲಾಗುತ್ತಿದೆ’‍ ಎಂದು ಆರೋಪಿಸಿದರು.

ವಿಫಲ: ‘ಅಂಗನವಾಡಿ ಆಹಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ವಿಧಾನ ಪರಿಷತ್‌ ಸದಸ್ಯೆ ಜಯಮಾಲಾ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT