ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಪ್ರತಿನಿತ್ಯ ದೂಳಿನ ಸಮಸ್ಯೆ ಹೆಚ್ಚಾಗುತ್ತಿದೆ. ಇದರಿಂದ ಇಲ್ಲಿನ ವ್ಯಾಪಾರಿಗಳು ನಾನಾ ರೋಗಗಳಿಂದ ಬಳಲುತ್ತಿದ್ದಾರೆ. ರಸ್ತೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಶಾಸಕ ರಿಜ್ವಾನ್ ಅರ್ಷದ್ ಅವರಿಗೆ ಮನವಿ ಸಲ್ಲಿಸಲಾಗಿದೆ.
–ಅಬ್ದುಲ್ ಮತೀನ್ ಬಟ್ಟೆ ವ್ಯಾಪಾರಿ
ಅಭಿವೃದ್ಧಿಯ ಹೆಸರಿನಲ್ಲಿ ರಸ್ತೆ ಅಗೆದು ಹಾಗಿಯೇ ಬಿಡಲಾಗಿದೆ. ಇದರಿಂದ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ಸ್ಥಳೀಯ ಶಾಸಕರು ನಮ್ಮ ಕಷ್ಟಗಳನ್ನು ಆಲಿಸುತ್ತಿಲ್ಲ. ಆದಷ್ಟು ಬೇಗ ಕಾಮಗಾರಿಯನ್ನು ಮುಗಿಸಬೇಕು.